ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕೊನೆಗೂ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಸಿದ ಪೊಲೀಸರು

0
Spread the love

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯ ಬರ್ಬರ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಸೇರಿ ಒಟ್ಟು 17 ಆರೋಪಿಗಳು ಸದ್ಯ ಜೈಲುಗಳಲ್ಲಿ ಕಂಬಿ ಎಣಿಸುತ್ತಿದ್ದಾರೆ. . ಈ ಕೇಸ್​ನ ತನಿಖೆ ಕೊನೇ ಹಂತಕ್ಕೆ ಬಂದಿದೆ.  ಈಗಾಗಲೇ ಪ್ರಕರಣದ ಆಳ-ಅಗಲ ಬಿಡದೇ ಇಂಚಿಂಚೂ ತನಿಖೆ ನಡೆಸಿರುವ ಪೊಲೀಸರು ಕೊನೆಗೂ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದಾರೆ.

Advertisement

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಒಂದು ಪ್ರಮುಖ ಬೆಳವಣಿಗೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಹಾಗಾಗಿಲ್ಲ. ಇದು ದರ್ಶನ್ ಫ್ಯಾನ್ಸ್​ಗೆ ಕೊಂಚ ರಿಲೀಫ್ ನೀಡಿದೆ.

ಈ ಮೊದಲು ಎಫ್​ಐಆರ್​ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದರು. ಇದನ್ನು ಚಾರ್ಜ್​ಶೀಟ್​ನಲ್ಲಿ ಬದಲಿಸಬಹುದು ಎಂದು ಊಹಿಸಲಾಗಿತ್ತು. ದರ್ಶನ್ ಎ1 ಹಗೂ ಪವಿತ್ರಾ ಎ2 ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಎಸಿಪಿ ಚಂದನ್​​ ಕುಮಾರ್ ಹಾಗೂ ತನಿಖಾ ತಂಡ ದರ್ಶನ್ ಅವರನ್ನು ಎರಡನೇ ಆರೋಪಿ ಆಗಿ ಉಲ್ಲೇಖ ಮಾಡಿದೆ.

17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. 3 ಪ್ರತ್ಯಕ್ಷ ಸಾಕ್ಷಿಗಳು ಇವೆ. ಎಫ್​ಎಸ್​ಎಲ್​ ಮಾತ್ತು ಸಿಎಫ್​ಎಸ್​ಎಲ್​ನಿಂದ 8 ವರದಿಗಳು ಇವೆ. ಈ ಪ್ರಕರಣದಲ್ಲಿ ಒಟ್ಟೂ 231 ಸಾಕ್ಷಿಗಳು ಇವೆ. ಕೊಲೆ ಕೇಸ್​ನಲ್ಲಿ ಇನ್ನೂ ತನಿಖೆ ಪೂರ್ಣಗೊಂಡಿಲ್ಲ. ಹೀಗಾಗಿ, ಹೀಗಾಗಿ ಸಿಆರ್​ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here