HomeKarnataka Newsಡಬಲ್ ಪೇಮೆಂಟ್ ಹಗರಣ: ಇಡಿ ಅಧಿಕಾರಿಗಳಿಂದ ಇಬ್ಬರು ವಶಕ್ಕೆ!

ಡಬಲ್ ಪೇಮೆಂಟ್ ಹಗರಣ: ಇಡಿ ಅಧಿಕಾರಿಗಳಿಂದ ಇಬ್ಬರು ವಶಕ್ಕೆ!

For Dai;y Updates Join Our whatsapp Group

Spread the love

ಧಾರವಾಡ:- ಡಬಲ್ ಪೇಮೆಂಟ್ ಹಗರಣಕ್ಕೆ ಸಂಬಂಧಿಸಿದಂತೆ ಧಾರವಾಡ ಕೆಐಎಡಿಬಿ ನಿವೃತ್ತ ಭೂಸ್ವಾಧೀನಾಧಿಕಾರಿ ಸೇರಿ ಇಬ್ಬರನ್ನು ಇಡಿ ವಶಕ್ಕೆ ಪಡೆಯಲಾಗಿದೆ.

ವಿ.ಡಿ. ಸಜ್ಜನ್, ಅಶ್ಫಾಕ್​ ​ದುಂಡಸಿ ಇವರನ್ನು ಇಡಿ ವಶಕ್ಕೆ ಪಡೆದಿದೆ. ಪ್ರಕರಣದಲ್ಲಿ ಜಾಮೀನು ಸಿಗದ ಹಿನ್ನೆಲೆ ಈ ಇಬ್ಬರು ಧಾರವಾಡ ಜಿಲ್ಲಾ ಕಾರಾಗೃಹದಲ್ಲಿದ್ದರು. ಇತ್ತೀಚೆಗೆ ಕೆಐಎಡಿಬಿ ಕಚೇರಿ ಮೇಲೆ ದಾಳಿ ಮಾಡಿದ್ದ ಇಡಿ ತಂಡ, ಅನೇಕ ದಾಖಲೆ ಪತ್ರ ವಶಕ್ಕೆ ಪಡೆದು ಪರಿಶೀಲನೆ ನಡೆಸಿತ್ತು. ಅದರಂತೆ ಪ್ರಕರಣದ ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ಕರೆದೊಯ್ಯಲಾಗಿದೆ.

ಕೆಐಎಡಿಬಿಯಲ್ಲಿ ನಕಲಿ ರೈತರ ಖಾತೆಗಳನ್ನು ಸೃಷ್ಟಿಸಿ, ಇಲಾಖೆಯ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿದ್ದ ವ್ಹಿ. ಡಿ. ಸಜ್ಜನ್ ತಮ್ಮ ನಿವೃತ್ತಿಯ ಕೊನೆಯ ದಿನವೇ 30 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ‌ಬಂದಿತ್ತು.

ಅದರಲ್ಲಿ ಸಜ್ಜನ್ ಮೊದಲನೇ ಆರೋಪಿ ಆಗಿ, ಜೈಲು ಸೇರಿದ್ದರು. ಡಬಲ್ ಪೇಮೆಂಟ್ ಕುರಿತು ಸಿಐಡಿ ತನಿಖೆಯ ಚಾರ್ಜ್ ಶೀಟ್​ನಲ್ಲಿ ಒಂದೇ ದಿನದಲ್ಲಿ 30 ಕೋಟಿ ರೂಪಾಯಿ ಹಣ ವರ್ಗಾವಣೆ ಬಗ್ಗೆ ಆರೋಪಿಸಲಾಗಿತ್ತು.

ಇದೇ ವೇಳೆ ಸಿಐಡಿ ತನಿಖೆಯಲ್ಲಿ ಸಾಕಷ್ಟು ಲೋಪಗಳಾಗಿವೆ ಎನ್ನುವ ಆರೋಪವೂ ಕೇಳಿ ಬಂದಿತ್ತು. ಈ ಹಿನ್ನಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಎಂಟ್ರಿ ಕೊಟ್ಟು ಕೆಐಎಡಿಬಿ ಕಚೇರಿಗೆ ದಾಳಿ ಮಾಡಿತ್ತು.

ಸರ್ಕಾರ ಹಾಗೂ ರೈತರ ನಡುವೆ ಕೆಲಸ ಮಾಡುವ ಇಲಾಖೆ ಇದಾಗಿದ್ದು, ರೈತರಿಂದ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಕೈಗಾರಿಕೆಗಳಿಗೆ ನೀಡಲಾಗುತ್ತದೆ. ಆದರೆ, ಇದನ್ನೇ ದಂಧೆ ಮಾಡಿಕೊಂಡ ಅಧಿಕಾರಿಗಳು ಹಾಗೂ ಏಜೆಂಟರು ನಿರಂತರವಾಗಿ ಹಣವನ್ನು ಲೂಟಿ ಮಾಡುತ್ತಲೇ ಬಂದಿದ್ದಾರೆ.

ಇದೀಗ ಜಾರಿ ನಿರ್ದೇಶನಾಲಯ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ಶುರು ಮಾಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!