ಬೆಂಗಳೂರು: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದ್ದು, ಚಿಕಿತ್ಸೆ ಫಲಿಸದೆ ಅನುಷಾ ಎಂಬುವವರು ಕೊನೆಯುಸಿರೆಳೆದಿದ್ದಾರೆ. 2 ದಿನದ ಹಿಂದೆ ಅನುಷಾ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಬೆಂಗಳೂರಿನ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.
Advertisement
5 ವರ್ಷದ ಹಿಂದೆ ಶ್ರೀಹರಿ ಜೊತೆ ಅನುಷಾ ಮದುವೆ ಆಗಿತ್ತು. ಶ್ರೀಹರಿ, ಅನುಷಾ ದಂಪತಿಗೆ ಎರಡು ವರ್ಷದ ಮಗು ಕೂಡ ಇದೆ. ಆದರೆ, ಪತಿ ಅನೈತಿಕ ಸಂಬಂಧ ವಿಚಾರವಾಗಿ ದಂಪತಿ ನಡುವೆ ಗಲಾಟೆಯಾಗಿದ್ದು, ಇದರಿಂದ ಮನನೊಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.
ಗಂಭೀರ ಗಾಯಗೊಂಡಿದ್ದ ಅನುಷಾಳನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.