ಚಿತ್ರದುರ್ಗ:- ಜಿಲ್ಲೆಯ ಹೊಸದುರ್ಗದ ಎಪಿಎಂಸಿ ಬಳಿ ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವಂತಹ ಘಟನೆ ಜರುಗಿದೆ.
Advertisement
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅಸ್ವಸ್ಥರನ್ನು ಹೊಸದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ತಿಳಿದು ಬಂದಿದೆ.