ಕ್ಯಾನ್ಸರ್ ರೋಗಿಗಳಿಗೆ ರಿಲೀಫ್: ಔಷಧ’ಗಳ ಮೇಲಿನ ‘GST’ ಇಳಿಕೆ- ನಿರ್ಮಲಾ ಸೀತಾರಾಮನ್!

0
Spread the love

ನವದೆಹಲಿ: ಕ್ಯಾನ್ಸರ್ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Advertisement

ಜೀವವಿಮೆ ಮತ್ತು ಆರೋಗ್ಯ ವಿಮೆಗಳ ಮೇಲಿನ ತೆರಿಗೆ ದರ ಇಳಿಕೆಯ ಪರಿಶೀಲನೆಗೆ ಸಚಿವರ ಸಮಿತಿಯೊಂದನ್ನು ರಚಿಸಲು ಹಾಗೂ ಕ್ಯಾನ್ಸರ್ ಔಷಧಿಗಳು ಮತ್ತು ನಮಕೀನ್ ಗಳ ಮೇಲಿನ ತೆರಿಗೆ ದರವನ್ನು ಕಡಿತಗೊಳಿಸಲು ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ ಜಿಎಸ್‌ಟಿ ಮಂಡಳಿಯು ಸೋಮವಾರ ನಡೆದ ತನ್ನ 54ನೇ ಸಭೆಯಲ್ಲಿ ನಿರ್ಧರಿಸಿದೆ.

ಜಿಎಸ್‌ಟಿ ಕೌನ್ಸಿಲ್‌ನ 54 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಸೀತಾರಾಮನ್, ಕೆಲವು ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ದರವನ್ನು ಶೇ.12 ರಿಂದ ಶೇ.5 ಕ್ಕೆ ಇಳಿಸಲಾಗಿದೆ ಎಂದು ಹೇಳಿದರು. ಕೌನ್ಸಿಲ್ ಸಹ ನಮ್ಕೀನ್ ಮೇಲಿನ ದರವನ್ನು ಶೇ.18 ರಿಂದ ಶೇ.12 ಕ್ಕೆ ಇಳಿಸಿದೆ ಎಂದು ಎಂದು ಮಾಹಿತಿ ನೀಡಿದ್ದಾರೆ.

ಕಳೆದ ಆರು ತಿಂಗಳಲ್ಲಿ ಆನ್‌ಲೈನ್ ಗೇಮಿಂಗ್‌ನಿಂದ ಗಳಿಸಿದ ಆದಾಯವು ಶೇ.412 ರಷ್ಟು ಹೆಚ್ಚಾಗಿದೆ. ಆನ್‌ಲೈನ್ ಗೇಮಿಂಗ್‌ನಿಂದ ಆದಾಯವು ಆರು ತಿಂಗಳಲ್ಲಿ 6,909 ಕೋಟಿ ರೂ.ಗೆ ಹೆಚ್ಚಾಗಿದೆ. ಇದಲ್ಲದೇ, ಕಳೆದ ಆರು ತಿಂಗಳಲ್ಲಿ ಕ್ಯಾಸಿನೊಗಳ ಆದಾಯವು ಶೇ.34 ರಷ್ಟು ಏರಿಕೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here