ರೇಣುಕಾಸ್ವಾಮಿ ಕೊಲೆ ಕೇಸ್‌: ಚಾರ್ಜ್‌ ಶೀಟ್‌ʼನಲ್ಲಿರುವ ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ

0
Spread the love

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೇಸ್​ನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಈಗಾಗಲೇ ದರ್ಶನ್ ವಿರುದ್ಧ ಪೊಲೀಸರು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ಕುರಿತಂತೆ ಚಾರ್ಜ್‌ಶೀಟ್‌ನಲ್ಲಿರುವ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.

Advertisement

ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ ಅವರಿದ್ದ ನ್ಯಾಯಪೀಠದಿಂದ ಆದೇಶ ನೀಡಿದೆ. ” ರೇಣುಕಾಸ್ವಾಮಿ‌ ಕೊಲೆ ಪ್ರಕರಣದ ಸಂಬಂಧಿತ ಆರೋಪ ಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಪ್ರಸಾರ/ಪ್ರಕಟ/ಹಂಚಿಕೆ ಮಾಡದಂತೆ ವಿದ್ಯುನ್ಮಾನ,

ಮುದ್ರಣ & ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ” ಹಾಕಲಾಗಿದೆ. ನ್ಯಾಯಾಲಯದ ಈ ಆದೇಶ ಉಲ್ಲಂಘಿಸಿದರೆ ಕ್ರಮಕೈಗೊಳ್ಳುವಂತೆ ಕೇಂದ್ರ ಮಾಹಿತಿ & ಪ್ರಸಾರ ಇಲಾಖೆಗೆ ನಿರ್ದೇಶಿಸಿದ ಹೈಕೋರ್ಟ್. ಈ ಆದೇಶವನ್ನು ಪ್ರತಿವಾದಿ ಮಾಧ್ಯಮಗಳಿಗೆ ರವಾನಿಸಲು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.


Spread the love

LEAVE A REPLY

Please enter your comment!
Please enter your name here