ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಕೇಸ್ ಫಾಸ್ಟ್ ಟ್ರ್ಯಾಕ್ ಕೋರ್ಟ್‌ʼಗೆ ನೀಡಲು ಚಿಂತನೆ: ಪೊಲೀಸ್‌ ಆಯುಕ್ತ

0
Spread the love

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಕುರಿತಂತೆ ಪೊಲೀಸರು ಸುದೀರ್ಘವಾದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪ ಪಟ್ಟಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪಿಗಳ ಪರ ವಕೀಲರ ಅವಗಾಹನೆಗೆ ನೀಡಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣ ಕುರಿತಾದ ಹಲವು ಆಘಾತಕಾರಿ ವಿಷಯಗಳನ್ನು ಆರೋಪ ಪಟ್ಟಿ ಒಳಗೊಂಡಿದೆ.

Advertisement

ಇನ್ನೂ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ಅಥವಾ ಸ್ಪೆಷಲ್ ಕೋರ್ಟ್‌ʼಗೆ ಮನವಿ ಚಿಂತನೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ. ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಅಥವಾ ಸ್ಪೆಷಲ್ ಕೋರ್ಟ್‌ಗೆ ಮನವಿ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಬಹುಪಾಲು ರಿಪೋರ್ಟ್‌ಗಳು ಚಾರ್ಜ್‌ಶೀಟ್‌ ಸಲ್ಲಿಕೆಗೂ ಮುನ್ನವೇ ನಮ್ಮ ಕೈಸೇರಿದೆ. ಮತ್ತಷ್ಟು ರಿಪೋರ್ಟ್‌ ಬರಬೇಕಿದೆ, ಆ ಬಳಿಕ ಕೋರ್ಟ್‌ಗೆ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ವಿಚಾರಕ್ಕೆ ಪ್ರತಿಕ್ರಿಯಿ, ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಸಿಸಿಬಿ ಜಂಟಿ ಪೊಲೀಸ್ ಡಾ.ಚಂದ್ರಗುಪ್ತ ನೇತೃತ್ವದಲ್ಲಿ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here