HomeGadag Newsಶ್ರೀ ಜ.ಶಿವಾನಂದ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಶ್ರೀ ಜ.ಶಿವಾನಂದ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಶ್ರೀ ಜಗದ್ಗುರು ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಭಾರತರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನೋತ್ಸವ, ಶಿಕ್ಷಕರ ದಿನಾಚರಣೆಯನ್ನು ವಿದ್ಯಾರ್ಥಿಗಳು ವಿಜೃಭಣೆಯಿಂದ ಆಚರಿಸಿದರು.

ಶಿಕ್ಷಕರಿಗಾಗಿಯೇ ಕ್ರೀಡೆಗಳನ್ನು ಏರ್ಪಡಿಸಿ ಸ್ಫರ್ಧೆಯಲ್ಲಿ ಗೆದ್ದವರಿಗೆ ಬಹುಮಾನ ವಿತರಿಸಿ ವಿದ್ಯಾರ್ಥಿಗಳು ಮನರಂಜಿಸಿದರು. ಇಂದಿನ ವಿದ್ಯಾರ್ಥಿಗಳು ಮುಂದಿನ ಸತ್ಪçಜೆಗಳಾಗಿ ದೇಶಕ್ಕೆ ತಮ್ಮ ಅಮೂಲ್ಯವಾದ ಕೊಡುಗೆಯನ್ನು ನೀಡಬೇಕು. ಶಿಕ್ಷಕರನ್ನು ಗೌರವಿಸುವ ಈ ಮನೋಭಾವ ನಿಮ್ಮಲ್ಲಿ ಸದಾ ಜಾಗೃತವಾಗಿರಲಿ ಸಜ್ಜನರಾಗಿ ಬಾಳಿ ಎಂದು ಪ್ರಾಚಾರ್ಯರಾದ ಎಸ್.ವ್ಹಿ. ವೆರ್ಣೇಕರ ಅವರು ನುಡಿದರು.

ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಆನಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸರ್ವ ಸಿಬ್ಬಂದಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img