HomeGadag Newsಆತ್ಮಹತ್ಯೆ ಸಾಮಾಜಿಕ ಸಮಸ್ಯೆಯಾಗಿದೆ : ಸಿ.ಎಸ್. ಶಿವನಗೌಡ್ರ

ಆತ್ಮಹತ್ಯೆ ಸಾಮಾಜಿಕ ಸಮಸ್ಯೆಯಾಗಿದೆ : ಸಿ.ಎಸ್. ಶಿವನಗೌಡ್ರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಾಕ್ರಮ, ವೈದ್ಯಕೀಯ ಮಹಾವಿದ್ಯಾಲಯ-ಮಾನಸಿಕ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಾರ್ತಾ ಇಲಾಖೆ, ಜಿಲ್ಲಾ ವಕೀಲರ ಸಂಘ ಗದಗ ಹಾಗೂ ಜಿಲ್ಲಾ ಐ.ಇ.ಸಿ ವಿಭಾಗ ಮತ್ತು ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಗದಗ ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಲ್ಲಿ `ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ-2024’ರ ಅಂಗವಾಗಿ ಜಾಗೃತಿ ರಥ ಹಾಗೂ ಜಾಥಾ ಕಾರ್ಯಕ್ರಮ ಜರುಗಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಅವರು ಜಾಗೃತಿ ರಥ ಹಾಗೂ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಆತ್ಮಹತ್ಯೆ ಎಂಬುದು ವೈಯಕ್ತಿಕ ಸಮಸ್ಯೆಯಾಗದೇ ಸಾಮಾಜಿಕ ಸಮಸ್ಯೆಯಾಗಿ ಪರಿಣಮಿಸಿದೆ. ಶಾಲಾ-ಕಾಲೇಜು ಮಕ್ಕಳಲ್ಲಿ ಆತಹತ್ಯೆ ಹೆಚ್ಚಾಗಿ ಕಂಡುಬರುತ್ತದೆ.

ಪ್ರತಿ ಸೆಕೆಂಡಿಗೆ ಒಬ್ಬರು ಆತ್ಮಹತ್ಯೆಗೆ ಪ್ರಯತ್ನ ಮಾಡುತ್ತಿದ್ದಾರೆ. `ಆತ್ಮಹತ್ಯೆಯ ನಿರೂಪಣೆಯನ್ನು ಬದಲಾಯಿಸುವುದು’ ಎಂಬ ಘೋಷವಾಕ್ಯ ಪ್ರಮುಖವಾಗಿದೆ. ಸಮಾಜದಲ್ಲಿ ನಾವೆಲ್ಲರೂ ಸೇರಿ ಆತ್ಮಹತ್ಯೆ ತಡೆಗಟ್ಟುವಂತೆ ಅರಿವು ಮೂಡಿಸುವುದು ಎಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಹಾಗೂ ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ. ರಾಜೇಂದ್ರ ಸಿ.ಬಸರಿಗಿಡದ ಸ್ವಾಗತಿಸಿ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯನ್ನು ಆಚರಿಸುವ ಕುರಿತು ಸಮಗ್ರ ಮಾಹಿತಿ ನೀಡಿ, ಆತ್ಮಹತ್ಯೆಯನ್ನು ತಡೆಗಟ್ಟುವ ಕುರಿತು ಸಮಗ್ರವಾಗಿ ವಿವರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಮೀಕ್ಷಣಾ ಅಧಿಕಾರಿ ಡಾ. ವೆಂಕಟೇಶ ರಾಠೋಡ, ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ. ಪ್ರೀತ್ ಖೋನಾ, ಡಾ. ವರ್ಷಾ ಜಿಲ್ಲಾ ಮನೋವೈದ್ಯರು ಹಾಗೂ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಸಮೀಕ್ಷಣಾ ಘಟಕ, ಜಿಲ್ಲಾ ಕುಷ್ಠರೋಗ ನಿಯಂತ್ರಣ ವಿಭಾಗ, ತಾಲೂಕಾ ಆರೋಗ್ಯ ಅಧಿಕಾರಿಗಳ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಗದಗ ನಗರದ ಪಿ.ಎಚ್.ಸಿ.ಓ ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ ಚವ್ಹಾಣ ವಂದಿಸಿದರು.

ಅಧ್ಯಕ್ಷತೆ ವಹಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ ಮಾತನಾಡಿ, ಆತ್ಮಹತ್ಯೆ ಕೇವಲ ವ್ಯಕ್ತಿಗತ ಸಮಸ್ಯೆಯಲ್ಲ. ಇದು ಸಮಾಜದ ಸಮಸ್ಯೆಯಾಗಿದೆ. ಹಾಗಾಗಿ ಇದರ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ. ಕಷ್ಟ ಕಾರ್ಪಣ್ಯಗಳು ಎಲ್ಲರಿಗೂ ಬರುತ್ತವೆ. ಅವುಗಳನ್ನು ಧೈರ್ಯದಿಂದ ಎದುರಿಸಬೇಕು ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!