ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸರ ಕಾರ್ಯಾಚರಣೆ ನಡೆಸಿ ಮನೆಗಳವು ಮಾಡುತ್ತಿದ್ದ ಕುಖ್ಯಾತ ಆರೋಪಿ ಬಂಧಿಸಿದ್ದಾರೆ. ರಿಯಾನ್ @ ನಾಗರಾಜ್ ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ 09 ಮನೆಗಳವು ಪ್ರಕರಣ ಬೆಳಕಿಗೆ ಬಂದಿದೆ.
ಸಿದ್ದಾಪುರ ನಿವಾಸಿ ಆಗಿರುವ ಆರೋಪಿ ರಿಯಾನ್, ಟಿವಿ ಡಿಶ್ ರಿಪೇರಿ ಮಾಡುವ ನೆಪದಲ್ಲಿ ಒಂಟಿ ಮನೆಗಳನ್ನ ಟಾರ್ಗೆಟ್ ಮಾಡಿ ಮನೆ ಕಳ್ಳತನ ಮಾಡುತ್ತಿದ್ದನು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು 20 ಲಕ್ಷ ಮೌಲ್ಯದ 300 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.



