ರಾಮನಗರ: ಕರ್ನಾಟಕದಲ್ಲಿ ನಂದಿನ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಯಾವಾಗಲೂ ರೈತರ ಪರ, ಹಾಲು ಉತ್ಪಾದಕರ ಪರ, ದಲಿತರು, ಬಡವರ ಪರ ಇರುತ್ತದೆ ಎಂದು ತಿಳಿಸಿದರು.
Advertisement
ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಸುಳಿವನ್ನು ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿಯೇ ತಿಳಿಸಿದ್ದು, ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದು ಹೇಳಿದ್ದಾರೆ. ಆ ಮೂಲಕ ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ನೀಡಲು ಸರ್ಕಾರ ಮುಂದಾಗುತ್ತಿದೆ.