ರಾಹುಲ್ ಗಾಂಧಿ ಪ್ರತಿಕೃತಿ ದಹನ

0
Burning effigy of Rahul Gandhi
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಎಐಸಿಸಿ ನಾಯಕ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಅಮೇರಿಕಾದಲ್ಲಿ ನೀಡಿರುವ ದಲಿತ ವಿರೋಧಿ ಹೇಳಿಕೆಯನ್ನು ಖಂಡಿಸಿ ಗದಗ ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಶಿವಪ್ಪ ಮುಳಗುಂದ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಗದಗ ಜಿಲ್ಲಾಡಳಿತ ಮುಂಭಾಗದಲ್ಲಿ ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿ ಅವರ ಪ್ರತಿಕೃತಿ ದಹಿಸುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದರು.

Advertisement

ಬಿಜೆಪಿ ಯುವಮುಖಂಡ ಉಮೇಶಗೌಡ ಪಾಟೀಲ್ ಮಾತನಾಡಿ, ರಾಹುಲ್ ಗಾಂಧಿಯವರು ಅಮೇರಿಕಾದಲ್ಲಿ ದಲಿತ ವಿರೋಧಿ ಹೇಳಿಕೆ ನೀಡುವ ಮೂಲಕ ತಮ್ಮ ತಾಯ್ನೆಲವನ್ನು ಅವಮಾನಿಸಿದ್ದು ಖಂಡನೀಯ ಎಂದರು.

ಗದಗ ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಶಿವಪ್ಪ ಮುಳಗುಂದ ಮಾತನಾಡಿ, ಚುನಾವಣಾ ಪ್ರಚಾರದಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಮಾತುನಾಡುತ್ತಿರುವ ತಾವು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರನ್ನು ಸ್ಮರಿಸಿಯೇ ಮುಂದೆ ಸಾಗಬೇಕು. ಅವರು ರಚಿಸಿರುವ ಸಂವಿಧಾನದ ಅಧಾರದ ಮೇಲೆಯೇ ದೇಶದ ಆಡಳಿತ ನಡೆಯುತ್ತಿರುವುದು ದಲಿತ ಸಮುದಾಯಕ್ಕೆ ಹೆಮ್ಮೆ ಮತ್ತು ಅಭಿಮಾನದ ಸಂಗತಿಯಾಗಿದೆ. ದಲಿತರನ್ನು ಗೌರವಿಸದ ಕಾಂಗ್ರೆಸ್ ನಾಯಕ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಎಂ.ಎಸ್. ಕರಿಗೌಡ್ರ, ಶ್ರೀಕಾಂತ ಖಟವಟೆ, ಭೀಮಸಿಂಗ್ ರಾಠೋಡ, ಅಶೋಕ ಕುಡತಿನ್ನಿ, ಉಡಚಪ್ಪ ಹಳ್ಳಕೇರಿ, ಅನಿಲ ಅಬ್ಬಿಗೇರಿ, ಅಶೋಕ ಮುಳಗುಂದ, ಬೂದಪ್ಪ ಹುಣಶೀಮರದ, ನಿರ್ಮಲಾ ಕೊಳ್ಳಿ, ಮಲ್ಲು ಮಾದರ, ಸುರೇಶ ಚಲವಾದಿ ಸೇರಿದಂತೆ ವಿವಿಧ ಮೋರ್ಚಾ, ಮಂಡಲ ಪದಾಧಿಕಾರಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಮಾತನಾಡಿ, ದಲಿತ ವಿರೋಧಿ ಹೇಳಿಕೆ ನೀಡಿರುವ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ವಿ.ಪ ಸದಸ್ಯ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಣ್ಣ ಕುರಡಗಿ, ದಲಿತ ವಿರೋಧಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸದರಾಗಿ ಮುಂದುವರೆಯುವ ಅರ್ಹತೆ ಕಳೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

LEAVE A REPLY

Please enter your comment!
Please enter your name here