HomeMUNICIPALITY NEWSಪಟ್ಟಣದ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ ಮಾಡುವೆ : ಮ್ಯಾಗೇರಿ

ಪಟ್ಟಣದ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ ಮಾಡುವೆ : ಮ್ಯಾಗೇರಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಪುರಸಭೆ ಸರ್ವ ಸದಸ್ಯರ ಹಾಗೂ ಅಧಿಕಾರಿಗಳ ಸಹಕಾರ ಪಡೆದು ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಹೇಳಿದರು.

ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ ಅಧ್ಯಕ್ಷರ ನೂತನ ಕೊಠಡಿಯಲ್ಲಿ ಪೂಜಾ ಕಾರ್ಯಕ್ರಮ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಕೆಲ ನಿರ್ಧಾರಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿತ್ತು. ಹೀಗಾಗಿ ವಾರ್ಡಿನ ಜನರ ಮತ್ತು ಪಟ್ಟಣದ ಅಭಿವೃದ್ಧಿಗಾಗಿ ನನ್ನದೇ ಆದ ಕಲ್ಪನೆಯನ್ನು ಹೊಂದಿದ್ದೇನೆ. ಪಟ್ಟಣದ 23 ವಾರ್ಡ್ಗಳಲ್ಲಿ ಕುಡಿಯುವ ನೀರು, ಸ್ವಚ್ಛತೆ, ತರಕಾರಿ ಮಾರುಕಟ್ಟೆ ಸಮಸ್ಯೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸರ್ವ ಸದಸ್ಯರ ಸಹಕಾರ, ಸಲಹೆ ಪಡೆದು ಪ್ರಾಮಾಣಿಕ ಕೆಲಸ ನಿರ್ವಹಿಸುತ್ತೇನೆ ಎಂದರು.

ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ, ಪುರಸಭೆ ಉಪಾಧ್ಯಕ್ಷೆ ಸವಿತಾ ಬಿದರಳ್ಳಿ, ಸದಸ್ಯರಾದ ಮುರ್ತುಜಾ ಡಾಲಾಯತ, ಶಿವರಾಜ ಘೋರ್ಪಡೆ, ಮುದಿಯಪ್ಪ ಮುಧೋಳ, ರಾಜು ಸಾಂಗ್ಲೀಕರ, ಶರಣಪ್ಪ ಉಪ್ಪಿನಬೆಟಗೇರಿ, ವೆಂಕಟೇಶ ಮುದಗಲ್, ಮುತ್ತಣ್ಣ ಮ್ಯಾಗೇರಿ, ರಫೀಕ್ ತೋರಗಲ್, ವಿಜಯಾ ಮಳಗಿ, ಹಾಗೂ ದುರಗಪ್ಪ ಮುಧೋಳ, ಎಂ.ವಾಯ್. ಮುಧೋಳ, ಗುಲಾಂ ಹುನಗುಂದ, ಸಿದ್ದಣ್ಣ ಚೋಳಿನ ಸೇರಿ ಇತರರು ಇದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img