HomeKarnataka Newsರಾಜ್ಯದಲ್ಲಿ ಭಯೋತ್ಪಾದಕರ ಅಟ್ಟಹಾಸ ಹೆಚ್ಚಾಗುತ್ತಿದೆ: ಆರ್ ಅಶೋಕ್!

ರಾಜ್ಯದಲ್ಲಿ ಭಯೋತ್ಪಾದಕರ ಅಟ್ಟಹಾಸ ಹೆಚ್ಚಾಗುತ್ತಿದೆ: ಆರ್ ಅಶೋಕ್!

For Dai;y Updates Join Our whatsapp Group

Spread the love

ಬೆಂಗಳೂರು:- ರಾಜ್ಯದಲ್ಲಿ ಭಯೋತ್ಪಾದಕರ ಅಟ್ಟಹಾಸ ಹೆಚ್ಚಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ದೇಶ ವಿರೋಧಿ ಶಕ್ತಿಗಳು ಹೆಚ್ಚಾಗುತ್ತಿವೆ. ನಾಗಮಂಗಲದಲ್ಲಿ ಸರ್ಕಾರ ಓಲೈಕೆ ರಾಜಕಾರಣ ನಡೆಸುತ್ತಿದೆ. ಮೊದಲ 25 ಜನರು ಹಿಂದೂಗಳ ಹೆಸರೇ ಇದೆ. ಇತ್ತ ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿದ್ದಾರೆ. ಈ ಸರ್ಕಾರ ಬಂದ ನಂತರ ಭಯವೇ ಇಲ್ಲದಂತಾಗಿದೆ. ಇದನ್ನೆಲ್ಲ ನೋಡಿದರೆ ರಾಜ್ಯದಲ್ಲಿ ದೇಶ ವಿರೋಧಿ ಶಕ್ತಿಗಳು ಹೆಚ್ಚಾಗುತ್ತಿವೆ ಎಂದಿದ್ದಾರೆ.

ಕಳೆದ 15 ತಿಂಗಳಿಂದ ರಾಜ್ಯದಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆಯುತ್ತಿದೆ. ಸಿಎಂ, ಡಿಸಿಎಂ ತಮ್ಮದೇ ಗೊಂದಲಗಳಲ್ಲಿ ಸಿಕ್ಕಿಕೊಂಡಿದ್ದಾರೆ. ರಾಜ್ಯದಲ್ಲಿ ಭಯೋತ್ಪಾದಕರ ಅಟ್ಟಹಾಸ ನಡೀತಿದೆ ಎಂದು ಕಿಡಿಕಾರಿದ್ದಾರೆ.

ನಾಗಮಂಗಲ ಗಲಭೆಯಲ್ಲಿ ನಲ್ಲಿ ಹಿಂದೂಗಳ ಮೇಲೆ ಹೆಚ್ಚು ಕೇಸ್ ಹಾಕಲಾಗಿದೆ. ಗಲಭೆಯಲ್ಲಿ ಪಿಎಫ್‍ಐ ಲಿಂಕ್ ಇದ್ದವರೂ ಇದ್ದರು ಎನ್ನಲಾಗಿದೆ. ಅವರನ್ನು ಕೇರಳದಿಂದ ಕರೆಸುವ ಕೆಲಸವನ್ನು ಕಿಡಿಗೇಡಿ ಮುಸ್ಲಿಮರು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಗಳೂರಿನಲ್ಲೂ ಕೋಮುಗಲಭೆ ನಡೆಯುತ್ತಿದೆ. ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ರಾಜಾರೋಷವಾಗಿ ಘೋಷಣೆ ಕೂಗುತ್ತಾ ಹೋಗಿದ್ದಾರೆ. ಈ ಸರ್ಕಾರ ಬಂದ ಮೇಲೆ ಭಯೋತ್ಪಾದಕರಿಗೆ, ಪಿಎಫ್‍ಐನವ್ರಿಗೆ ಭಯ ಇಲ್ಲದಂತಾಗಿದೆ. ಒಂದು ಕಡೆ ರಾಹುಲ್ ವಿದೇಶಗಳಲ್ಲಿ ಭಾರತ ಬಗ್ಗೆ ಟೀಕೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಾಗಮಂಗಲ, ಮಂಗಳೂರು, ಚಿಕ್ಕಮಗಳೂರು ಘಟನೆಗಳಿಂದ ಮತ್ತೆ ಕಾಂಗ್ರೆಸ್ ವಿಭಜನೆ ಕೆಲಸಕ್ಕೆ ಮುಂದಾಗಿದೆ. ಪ್ರಗತಿಪರರು, ನಗರ ನಕ್ಸಲರು ಕಾಂಗ್ರೆಸ್‍ಗೆ ಕುಮ್ಮಕ್ಕು ಕೊಡ್ತಿದ್ದಾರೆ. ಈ ಪ್ರಗತಿಪರರು, ನಗರ ನಕ್ಸಲರು ಯಾಕೆ ಈ ಘಟನೆಗಳನ್ನು ಖಂಡಿಸ್ತಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!