ನವದೆಹಲಿ: ಸಿಎಂ ಸ್ಥಾನಕ್ಕೆ ದಿಢೀರನೆ ರಾಜೀನಾಮೆ ಘೋಷಿಸುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಆಮ್ ಆದ್ಮಿ ಕಾರ್ಯಕರ್ತರಿಗೆ ಹಾಗೂ ತಮ್ಮ ಅಭಿಮಾನಿಗಳಿಗೆ ಪ್ಲೆಸೆಂಟ್ ಶಾಕ್ ನೀಡಿದ್ದರು.
ಇದರ ಬೆನ್ನಲ್ಲೇ ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ.
ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾದ ನಂತರ ಅರವಿಂದ್ ಕೇಜ್ರಿವಾಲ್ ಅವರು ಉನ್ನತ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ದೆಹಲಿ ಸಚಿವ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ನಡೆದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.



