ಉಡುಪಿ:-ಯಕೃತ್ ದಾನ ಮಾಡಲು ಹೋಗಿ 34 ವರ್ಷದ ಮಹಿಳೆ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದಲ್ಲಿ ಜರುಗಿದೆ.
Advertisement
ಅರ್ಚನಾ ಕಾಮತ್ ಮೃತಪಟ್ಟ ಮಹಿಳೆ. ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಬಯಸಿದ್ದ ಅರ್ಚನಾ ಕಾಮತ್ ಅವರು, ಯಕೃತ್ ದಾನ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸೋಂಕಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ.
ಸದಾ ಸಮಾಜಮುಖಿ ಚಿಂತನೆಯೊಂದಿಗೆ ಸಕ್ರಿಯವಾಗಿದ್ದ ಅರ್ಚನಾ ಕಾಮತ್ ಅವರು ನಗರದ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿದ್ದರು. ತಮ್ಮ ಯಕೃತ್‌ನ ಒಂದು ಭಾಗವನ್ನು ಪತಿಯ ಸಂಬಂಧಿಗೆ ದಾನ ಮಾಡಿ ಇಹಲೋಕ ತ್ಯಜಿಸಿದ್ದಾರೆ. ಅಕಾಲಿಕ ನಿಧನದಿಂದ ಅರ್ಚನಾ ಅವರ ಸಂಬಂಧಿಕರು, ಆತ್ಮೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.