ಚಿತ್ರದುರ್ಗ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ!

0
Spread the love

ಚಿತ್ರದುರ್ಗ: ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಮೀನು ಪೋಡಿ ಮಾಡಲು ರೈತನ ಬಳಿ 10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 9 ಸಾವಿರ ಲಂಚ ಪಡೆಯುವಾಗ  VA ನಾಗಪ್ಪ ಲಮಾಣಿ ಲೋಕಾ ಬಲೆಗೆ ಬಿದ್ದಿದ್ದಾರೆ. ಹಲಗಲದ್ದಿ ಗ್ರಾಮದ ತಿಪ್ಪೇಸ್ವಾಮಿ ಎಂಬ ರೈತನಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.

Advertisement

ದೂರು ಆಧರಿಸಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ DYSP ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಿದ್ದು, 9 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಾಗಪ್ಪ ಲಮಾಣಿಯನ್ನ ವಶಕ್ಕೆ ಪಡೆದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here