ಬೆಂಗಳೂರು:- ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ಜರುಗಿದೆ.
Advertisement
ಯಶವಂತಪುರದಿಂದ ಬಸ್ ಮೆಜೆಸ್ಟಿಕ್ಗೆ ಬರುತ್ತಿದ್ದ ವೇಳೆ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದ ಎಂಟ್ರಿ ಗೇಟ್ ಬಳಿ ಅವಘಡ ಸಂಭವಿಸಿದೆ. ಘಟನೆಗೆ ಅತಿವೇಗದ ಚಾಲನೆಯೇ ಕಾರಣ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಕಾರಣವಾದ ಬಿಎಂಟಿಸಿ ಚಾಲಕ ಗೋಪಾಲಯ್ಯನನ್ನ ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.