ನಮ್ಮ ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ ಮಹಿಳಾ ಆಯೋಗದಿಂದ BMRCLಗೆ ಪತ್ರ!

0
Spread the love

ಬೆಂಗಳೂರು:- ನಮ್ಮ ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ BMRCLಗೆ ಮಹಿಳಾ ಆಯೋಗ ಪತ್ರ ಬರೆದು ಮನವಿ ಮಾಡಿದೆ.

Advertisement

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಬರೆದಿರುವ ಪತ್ರದಲ್ಲಿ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣಗಳಲ್ಲಿ ಆರೈಕೆ ಕೇಂದ್ರಗಳು ಇವೆ. ಇದೇರೀತಿ ನಮ್ಮ ಮೆಟ್ರೋ ನಿಲ್ದಾಣಗಳಲ್ಲೂ ಆರೈಕೆ ಕೇಂದ್ರ ಸ್ಥಾಪಿಸುವಂತೆ ಸೂಚಿಸಿದ್ದಾರೆ.

ಸೆಪ್ಟೆಂಬರ್​ 16 ರಂದು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲು ಬಂದ ತಾಯಿಯೊಬ್ಬರು ಮಗುವಿಗೆ ಹಾಲುಣಿಸಲು ಪರದಾಡಿದರು. ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ಮಗುವಿಗೆ ಹಾಲುಣಿಸಲು ಜಾಗ ಸಿಗದೆ, ಕೊನೆಗೆ ತಾಯಿ ನಿಲ್ದಾಣದ ಪ್ಲಾಟ್​ಫಾರಂನಲ್ಲಿ ಮರೆಯಲ್ಲಿ ಹಾಲುಣಿಸಿದರು. ಮಗುವಿಗೆ ಹಾಲುಣಿಸುತ್ತಿರುವ ವೇಳೆ ಪತಿ ಮತ್ತು ಮಾವ ಕಾವಲಿಗೆ ನಿಂತಿದ್ದರು. ತಾಯಿ ಮಗುವಿಗೆ ಹಾಲುಣಿಸಲು ಪರದಾಡಿದ ವಿಡಿಯೋ ವೈರಲ್​ ಆಗಿದೆ.

ಈ ವಿಚಾರ ತಿಳಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಬಿಎಂಆರ್​ಸಿಎಲ್​ಗೆ ಪತ್ರ ಬರೆದು ನಿಲ್ದಾಣಗಳಲ್ಲಿ ಆರೈಕೆ ಕೇಂದ್ರ ಸ್ಥಾಪನೆ ಮಾಡುವಂತೆ ಸೂಚಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here