HomePolitics Newsಮೋದಿಯವರಿಂದ ದೇಶದ ಕೀರ್ತಿ ಹೆಚ್ಚಿದೆ : ಡಾ. ಚಂದ್ರು ಲಮಾಣಿ

ಮೋದಿಯವರಿಂದ ದೇಶದ ಕೀರ್ತಿ ಹೆಚ್ಚಿದೆ : ಡಾ. ಚಂದ್ರು ಲಮಾಣಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ದೇಶದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಹುಟ್ಟಿದ ದಿನದ ಸಮಯವನ್ನು ಜನರ ಸೇವೆಗಾಗಿ ಮೀಸಲಿಡುತ್ತಾರೆ. ಮೋದಿಯವರು ಈ ದೇಶಕ್ಕೆ ದೊರತೆ ದೊಡ್ಡ ಶಕ್ತಿಯಾಗಿದ್ದು, ಅವರ ಮೂಲಕ ಜಗತ್ತಿನಲ್ಲಿ ಭಾರತದ ಕೀರ್ತಿ ಹೆಚ್ಚುವಂತಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಅವರ ಪಟ್ಟಣದಲ್ಲಿ ಮಂಗಳವಾರ ನರೇಂದ್ರ ಮೋದಿ ಅವರ 74ನೇ ಜನ್ಮದಿನದ ಅಂಗವಾಗಿ ಬಿಜೆಪಿ ಶಿರಹಟ್ಟಿ ಮಂಡಳ ಮತ್ತು ಲಕ್ಷ್ಮೇಶ್ವರ ಘಟಕದ ವತಿಯಿಂದ ಸೇವಾ ಪಾಕ್ಷಿಕ ಸ್ವಚ್ಛತಾ ಕಾರ್ಯಕ್ರಮದ ನಿಮಿತ್ತ ಪಟ್ಟಣದ ಪುರಾತನ ಪ್ರಸಿದ್ಧ ಲಕ್ಷ್ಮಣಲಿಂಗ ದೇವಸ್ಥಾನದ ಸುತ್ತಮುತ್ತಲ ಆವರಣವನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ನೆರವೇರಿಸಿ ಮಾತನಾಡಿದರು.

ಮೋದಿಯವರ ಜನ್ಮದಿನದ ಪ್ರಯುಕ್ತ ಸ್ವಚ್ಛತಾ ಅಭಿಯಾನ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಹಮ್ಮಿಕೊಂಡಿದ್ದು, ಪ್ರತಿಯೊಬ್ಬ ಕಾರ್ಯಕರ್ತರೂ ಇದರಲ್ಲಿ ಭಾಗಿಯಾಗಿ ಮೋದಿಯವರ ಜನ್ಮದಿನವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿ ಎಂದರು.

ಕಾರ್ಯಕ್ರಮದ ಅಂಗವಾಗಿ ದೇವಸ್ಥಾನದ ಆವರಣದಲ್ಲಿ ಸ್ವತಃ ಶಾಸಕರು ಕಸ ತೆಗೆಯುವ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು. ಗದಗ ಜಿಲ್ಲಾ ಬಿಜೆಪಿ ಖಜಾಂಚಿ ನಾಗರಾಜ ಕುಲಕರ್ಣಿ, ಮಂಡಳದ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ಪ್ರಧಾನ ಕಾರ್ಯದರ್ಶಿ ಅನಿಲ ಮುಳಗುಂದ, ನಗರ ಘಟಕದ ಅಧ್ಯಕ್ಷ ನವೀನ ಬೆಳ್ಳಟ್ಟಿ, ಯುವ ಘಟಕದ ಅಧ್ಯಕ್ಷ ಬಸವರಾಜ ಚಕ್ರಸಾಲಿ, ಮುಖಂಡರಾದ ಎಂ.ಆರ್. ಪಾಟೀಲ, ವಿಜಯಕುಮಾರ ಹತ್ತಿಕಾಳ, ಗಂಗಾಧರ ಮೆಣಸಿನಕಾಯಿ, ನೀಲಪ್ಪ ಹತ್ತಿ, ಶಕ್ತಿ ಕತ್ತಿ, ಸಂಗಮೇಶ ಬೆಳವಲಕೊಪ್ಪ, ಜಗದೀಶ ಪಾಟೀಲ, ನಿಂಗಪ್ಪ ಬನ್ನಿ, ಗಿರೀಶ ಚೌರಡ್ಡಿ, ಸಂತೋಷ ಜಾವೂರ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img