ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಡಿಸೆಂಬರ್ 15 ರವರೆಗಿನ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಬಿಡುಗಡೆ ಮಾಡಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ 147964 ಜನ ನಿಗಾಕ್ಕೆ ಒಳಗಾಗಿದ್ದಾರೆ. ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು 153347 ಮಾದರಿಗಳಲ್ಲಿ 142364 ಮಾದರಿಗಳು (ನೆಗೆಟಿವ್) ನಕಾರಾತ್ಮಕವಾಗಿವೆ. 147 ಮಾದರಿಗಳ ವರದಿ ಬರಲು ಬಾಕಿ ಇದೆ.
ಜಿಲ್ಲೆಯಲ್ಲಿ ಇಂದಿನ 08 (ಗದಗ-04, ರೋಣ-03, ಶಿರಹಟ್ಟಿ-01) ಪ್ರಕರಣಗಳು ಸೇರಿದಂತೆ ಒಟ್ಟು 10836 ಕೊವಿಡ್-19 ಪಾಸಿಟಿವ್ ಪ್ರಕರಣಗಳು ಧೃಡಪಟ್ಟಿವೆ. ಇಲ್ಲಿಯವರೆಗೂ ಜಿಲ್ಲೆಯಲ್ಲಿ
ಕೊವಿಡ್ ಸೋಂಕಿಗೆ 141 ಜನ ಮೃತಪಟ್ಟಿದ್ದು, ಇಂದಿನ 11 ಜನ ಸೇರಿದಂತೆ ಒಟ್ಟು 10653 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸದ್ಯ 42 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.