ಬೆಂಗಳೂರು: ನೃತ್ಯ ನಿರ್ದೇಶಕ ಶೇಕ್ ಜಾನಿ ಅಲಿಯಾಸ್ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ವಿರುದ್ಧ ಹೈದರಾಬಾದ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ರಾಯದುರ್ಗ ಪೊಲೀಸ್ ಸ್ಟೇಷನ್‌ನಲ್ಲಿ ದೂರು ದಾಖಲಿಸಿದ್ದಾರೆ. ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು.
ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಈಗ ಜಾನಿ ಮಾಸ್ಟರ್ ಅರೆಸ್ಟ್ ಮಾಡಿದ್ದಾರೆ. ಈ ಪ್ರಕರಣವನ್ನು ನರಸಿಂಗಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪುನೀತ್ ರಾಜ್‌ಕುಮಾರ್, ಸುದೀಪ್, ಅಲ್ಲು ಅರ್ಜುನ್ ಸೇರಿದಂತೆ ಅನೇಕ ಸ್ಟಾರ್‌ಗಳಿಗೆ ಈ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದರು.