HomeBengaluru Newsಸುಂದರಿ ಕರೆದಳು ಅಂತ ಹೋದವನಿಗೆ ಕಾದಿತ್ತು ಶಾಕ್: 40 ಲಕ್ಷ ಕಳೆದುಕೊಂಡ ಬೆಂಗಳೂರಿನ ಉದ್ಯಮಿ!

ಸುಂದರಿ ಕರೆದಳು ಅಂತ ಹೋದವನಿಗೆ ಕಾದಿತ್ತು ಶಾಕ್: 40 ಲಕ್ಷ ಕಳೆದುಕೊಂಡ ಬೆಂಗಳೂರಿನ ಉದ್ಯಮಿ!

For Dai;y Updates Join Our whatsapp Group

Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹನಿಟ್ರ್ಯಾಪ್‌ ಗ್ಯಾಂಗ್‌ನ ಖೆಡ್ಡಗೆ ಬಿದ್ದು ಉದ್ಯಮಿಯೊರ್ವರು ಬರೋಬ್ಬರಿ 40 ಲಕ್ಷ ರೂ. ಕಳೆದುಕೊಂಡ ಘಟನೆ ಜರುಗಿದೆ.

ಸಿನಿಮಾ ಮಾಡುವ ಹೆಸರಿನಲ್ಲಿ ಉದ್ಯಮಿಯಿಂದ ಹಣ ಪಡೆದು ವಂಚನೆ ಮಾಡಿರೋ ಆರೋಪ ಕೇಳಿ ಬಂದಿದೆ. ಗಣೇಶ್​ ಅವರಿಗೆ ಕುಟುಂಬ ಎಂಬ ಸೋಷಿಯಲ್ ಮೀಡಿಯಾ ಆ್ಯಪ್​ನಲ್ಲಿ ಕಾವ್ಯ ಎಂಬಾಕೆ ಪರಿಚಿತಳಾಗಿದ್ದಾಳೆ. ಈ ಕಾವ್ಯ ನಾಲ್ಕು ವರ್ಷಗಳ ಹಿಂದೆ ಸಿನಿಮಾ ಮಾಡುತ್ತಿರೋದಾಗಿ ಪರಿಚಿತಳಾಗಿದ್ದಳಂತೆ.

ಈ ಕಾವ್ಯ ನಾಲ್ಕು ವರ್ಷಗಳ ಹಿಂದೆ ಸಿನಿಮಾ ಮಾಡುತ್ತಿರೋದಾಗಿ ಪರಿಚಿತಳಾಗಿದ್ದಳಂತೆ. ನಿರ್ದೇಶಕ ಎಸ್.ಆರ್.ಪಾಟೀಲ್ ಎಂಬುವವರಿಗೆ 4.25 ಲಕ್ಷ ಹಣ ವರ್ಗಾಯಿಸಿಕೊಂಡಿದ್ದಳಂತೆ. ಕೊಟ್ಟ ಹಣ ವಾಪಸ್ಸು ಕೇಳಿದಾಗ ಕಾವ್ಯ ಗೊಟ್ಟಿಗೆರೆ ಬಳಿ ಗಣೇಶ್​ರನ್ನು ಕರೆಸಿಕೊಂಡು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿ ಅದನ್ನ ವೀಡಿಯೋ ಮಾಡಿ ಬಳಿಕ ಹನಿಟ್ರ್ಯಾಪ್ ಮಾಡಿದ್ದಾಳೆ ಎಂದು ತಿಳಿದುಬಂದಿದೆ.

ಆರೋಪಿ ಮಹಿಳೆ ಸಿನಿಮಾ‌ ಮಾಡೋಣ, ನಾನು ಅದೇ ಫೀಲ್ಡ್‌ನಲ್ಲಿದ್ದೇನೆ ಎಂದು ಸುಳ್ಳು ಹೇಳಿ ಉದ್ಯಮಿ ಸ್ನೇಹ ಮಾಡಿದ್ದಳು. ಇದಾದ ಕೆಲ ದಿನಗಳ‌ ನಂತರ ನಮ್ಮ ಡೈರೆಕ್ಟರ್‌ಗೆ ಹಣದ ಕಷ್ಟ ಇದೆ ಎಂದು ಹೇಳಿ ಉದ್ಯಮಿಯಿಂದ ನಾಲ್ಕು ಲಕ್ಷ ರೂ, ಹಣ ಪಡೆದಿದ್ದಾಳೆ. ನಂತರ ಹಣ ವಾಪಸ್ ಕೇಳಿದಾಗ ತನ್ನ ರೂಮಿಗೆ ಕರೆಸಿಕೊಂಡು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿ ಅದನ್ನ ವೀಡಿಯೋ ಮಾಡಿಕೊಂಡಿದ್ದಾಳೆ.

ಆ ಬಳಿಕ ಇದೇ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಉದ್ಯಮಿಯಿಂದ ಬ್ರಾಸ್‌ಲೈಟ್, ಚೈನ್ ಅಂತೆಲ್ಲಾ ಸುಮಾರು 40 ಲಕ್ಷ ರೂಪಾಯಿ ಹಣ ಪೀಕಿದ್ದಾಳೆ. ಅಷ್ಟಕ್ಕೆ ಸುಮ್ಮನಾಗದೇ ಕಾರು ಕೊಡಿಸು ಎಂದು ದುಂಬಾಲು ಬಿದ್ದಿದ್ದಾಳೆ. ಇದಕ್ಕೆ ಒಪ್ಪದಿದ್ದಾಗ ಆರೋಪಿ ಮಹಿಳೆ ತನ್ನ ಸ್ನೇಹಿತರಾದ ರವಿ ಮತ್ತು ದಿಲೀಪ್ ಎಂಬವರಿಂದ ಕರೆ ಮಾಡಿಸಿ ಹಣಕ್ಕೆ ಧಮ್ಕಿ ಹಾಕಿಸಿದ್ದಾಳೆ. ಹಣ ಕೊಡದಿದ್ದರೆ ವೀಡಿಯೋಗಳನ್ನ ಟಿವಿಗೆ ಕೊಡೋದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಅಷ್ಟೇ ಅಲ್ಲದೆ ಹಣ ನೀಡದಿದ್ದಾಗ ಸೋಷಿಯಲ್ ಮೀಡಿಯಾದಲ್ಲಿ ದೂರುದಾರನ ಫೋಟೋ ಹಾಕಿ ಮಾನಹರಣ ಮಾಡಿರುವುದಾಗಿ ಉದ್ಯಮಿ ದೂರು ನೀಡಿದ್ದಾರೆ.

ದೂರಿನ ಅನ್ವಯ ಪೊಲೀಸರಿಂದ ತನಿಖೆ ಮುಂದುವರಿದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!