HomeGadag Newsಪೋಷಣ ಮಾಸಾಚರಣೆ ಕಾರ್ಯಕ್ರಮ

ಪೋಷಣ ಮಾಸಾಚರಣೆ ಕಾರ್ಯಕ್ರಮ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ಹಾಗೂ ಶಿಶು ಅಭಿವೃದ್ಧಿ ಯೋಜನೆ ಗದಗ ಇವರ ಸಂಯುಕ್ತಾಶ್ರಯದಲ್ಲಿ ಹುಲಕೋಟಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ-298ರಲ್ಲಿ ಬುಧವಾರ ಪೋಷಣ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೋಷಣ ಮಾಸಾಚರಣೆ ಕಾರ್ಯಕ್ರಮದ ಕುರಿತಾದ ಪೌಷ್ಠಿಕ ಆಹಾರವನ್ನು ಮಕ್ಕಳು, ಗರ್ಭಿಣಿ, ಬಾಣಂತಿಯರು ಸರಿಯಾಗಿ ಸೇವಿಸಬೇಕು. ನಮ್ಮ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು. ಇದರಿಂದ ರೋಗ ರುಜಿನಗಳನ್ನು ತಡೆಗಟ್ಟಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಿಶು ಅಭಿವೃದ್ಧಿ ಯೋಜನೆ ಸಂರಕ್ಷಣಾಧಿಕಾರಿ ರಾಜೇಶ್ವರಿ ಮೇಟಿ ಮಾತನಾಡಿ, ಸೆಪ್ಟೆಂಬರ್ ಮಾಹೆಯಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮಕ್ಕಳ ಪೌಷ್ಠಿಕತೆ, ಗರ್ಭಿಣಿ ಬಾಣಂತಿ ಹಾಗೂ ಕಿಶೋರಿಯರಲ್ಲಿನ ರಕ್ತಹೀನತೆ ಹಾಗೂ ಇಲಾಖೆಯ ವಿವಿಧ ಯೋಜನೆಯ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಮಾತೃವಂದನಾ ಸಂಯೋಜಕರಾದ ಎಸ್.ಜಿ. ಪೂಜಾರ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುಳಾ ಕಮತ್ ಮಾತನಾಡಿದರು. ಪ್ರಮುಖರಾದ ನಾಗರತ್ನಾ ಬಾಳಿಹಳ್ಳಿವ್ಮಠ, ಶ್ರೀದೇವಿ ಕೋರಿ, ಕಮಲಾಕ್ಷಿ ಹಳ್ಳಿ, ದ್ಯಾಮವ್ವ ಮಡಿವಾಳರ, ಮಲ್ಲಮ್ಮ ಯಲಿಶೇಟ್ಟರ, ಬಸಮ್ಮ ಪವಾಡಣ್ಣವರ, ರೇಣುಕಾ ಹಡಪದ, ಕವಿತಾ ಶ್ಯಾವನಾಳಮಠ ಪಾಲ್ಗೊಂಡಿದ್ದರು.

ಎಸ್.ಜಿ. ಪೂಜಾರ, ಪವನ ಕಾಟೀಗರ, ವಿನೋದಾ ಹೊಂಬಳ, ಕಾವೇರಿ ಚೇಗೂರ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಗರ್ಭಿಣಿಯರು, ತಾಯಂದಿರು, ಮಕ್ಕಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸ್ತ್ರೀಶಕ್ತಿ ಗುಂಪಿನ ಸದಸ್ಯರು ಭಾಗವಹಿಸಿದ್ದರು. ಜ್ಯೋತಿ ಶಿವಶಿಂಪಿಗೇರ ಪ್ರಾರ್ಥಿಸಿದರು. ಪೂರ್ಣಿಮಾ ಪತ್ತಾರ ಸ್ವಾಗತಿಸಿದರು, ವಿನೋದಾ ಹೊಂಬಳ ನಿರೂಪಿಸಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!