ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾದರಲ್ಲಿದ್ದರು. ಶಾಸಕ ಮುನಿರತ್ನ ಗುರುವಾರ ಜಾಮೀನು ಪಡೆದು ಹೊರಬರುತ್ತಿದ್ದಂತೆ ಕಗ್ಗಲಿಪುರ ಠಾಣೆ ಪೊಲೀಸರು ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿದ್ದಾರೆ. ಹೌದು ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅಕ್ರಮಗಳಿಗೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಇದೀಗ ಬೆಳಕಿಗೆ ಬರುತ್ತಿದೆ.
2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.