HomeKarnataka Newsಇಡಿ & ಸಿಬಿಐ ಕೇಂದ್ರ ಸರ್ಕಾರದ ಗಿಳಿಗಳಾಗಿ ಮಾರ್ಪಟ್ಟಿದೆ: ದೆಹಲಿ ನೂತನ ಸಿಎಂ ಅತಿಶಿ!

ಇಡಿ & ಸಿಬಿಐ ಕೇಂದ್ರ ಸರ್ಕಾರದ ಗಿಳಿಗಳಾಗಿ ಮಾರ್ಪಟ್ಟಿದೆ: ದೆಹಲಿ ನೂತನ ಸಿಎಂ ಅತಿಶಿ!

For Dai;y Updates Join Our whatsapp Group

Spread the love

ನವದೆಹಲಿ:- ಇಡಿ & ಸಿಬಿಐ ಕೇಂದ್ರ ಸರ್ಕಾರದ ಗಿಳಿಗಳಾಗಿ ಮಾರ್ಪಟ್ಟಿದೆ ಎಂದು ದೆಹಲಿ ನೂತನ ಸಿಎಂ ಅತಿಶಿ ಹೇಳಿದ್ದಾರೆ.

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅರವಿಂದ್ ಕೇಜ್ರಿವಾಲ್ ವಿರುದ್ಧ ಪಿತೂರಿ ನಡೆಸಿತು, ಅವರನ್ನು 6 ತಿಂಗಳು ಜೈಲಿನಲ್ಲಿ ಇರಿಸಿತು, ಅವರನ್ನು ನಾಶ ಮಾಡಲು ಪ್ರಯತ್ನಿಸಿತು. ಆದರೆ ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿತು. ಇಡಿ ಮತ್ತು ಸಿಬಿಐ ಕೇಂದ್ರ ಸರ್ಕಾರದ ಗಿಳಿಗಳಾಗಿ ಮಾರ್ಪಟ್ಟಿದೆ ಎಂದು ಅತಿಶಿ ಆರೋಪಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರು ಜನತಾ ನ್ಯಾಯಾಲಯಕ್ಕೆ ಹೋಗುತ್ತೇನೆ ಎಂದು ಹೇಳಿದರು. ಇನ್ನುಮುಂದೆ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿರುವುದಿಲ್ಲ ಎಂಬುದು ಬಹಳ ಬೇಸರದ ಸಂಗತಿ. ಆದರೆ, ಮುಂದಿನ ವರ್ಷದ ಚುನಾವಣೆಯವರೆಗೆ ಮಾತ್ರ ನಾನು ಮುಖ್ಯಮಂತ್ರಿಯಾಗಿರುತ್ತೇನೆ. ಮತ್ತೆ ಆಮ್ ಆದ್ಮಿ ಪಕ್ಷ ಚುನಾವಣೆಯಲ್ಲಿ ಗೆದ್ದರೆ ಅರವಿಂದ್ ಕೇಜ್ರಿವಾಲ್ ಅವರೇ ಸಿಎಂ ಆಗುತ್ತಾರೆ. ಈಗ ನಮ್ಮ ಕೆಲಸವೆಂದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ಸಿಎಂ ಮಾಡುವುದು” ಎಂದು ಹೊಸ ದೆಹಲಿ ಸಿಎಂ ಅತಿಶಿ ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಬಡವರಿಗೆ ವಿದ್ಯುತ್ ನೀಡಿದ ವ್ಯಕ್ತಿ. ಅವರು ಮಕ್ಕಳಿಗೆ ಶಿಕ್ಷಣ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಇನ್ನೂ ಅನೇಕ ಯೋಜನೆಗಳನ್ನು ಪರಿಚಯಿಸಿದವರು” ಎಂದು ಅತಿಶಿ ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!