ವಿಜಯಸಾಕ್ಷಿ ಸುದ್ದಿ, ಮೈಸೂರು
ಪರಿಷತ್ ಒಳಗೆ ಮಾಸ್ಕ್ ಹಾಕದವರಿಗೆ,
ಸಾಮಾಜಿಕ ಅಂತರ ಕಾಪಾಡಿಕೊಳ್ಳದವರಿಗೆ, ದಂಡ ಹಾಕಬೇಕು. ಸಭಾಪತಿಗಳೇ ಈ ನಿರ್ಣಯ ಕೈಗೊಳ್ಳಲಿ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಆಗ್ರಹಿಸಿದರು.
ವಿಧಾನ ಪರಿಷತ್ ನಲ್ಲಿ ಗದ್ದಲ ಮಾಡುವ ವೇಳೆ ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನಪ್ರತಿನಿಧಿಗಳ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು,
ನಿಯಮ ಜನರಿಗೂ, ಜನಪ್ರತಿನಿಧಿಗಳಿಗೂ ಎಲ್ಲರಿಗೂ ಒಂದೇ. ನಿಯಮ ಪಾಲಿಸದ ಜನಪ್ರತಿನಿಧಿಗಳಿಗೆ ದಂಡ ವಿಧಿಸಿ ಎಂದರು.
ಜನ ಸಾಮಾನ್ಯರು ಈ ವಿಚಾರದಲ್ಲಿ ಎತ್ತಿರುವ ಧ್ವನಿ ನ್ಯಾಯಸಮ್ಮತ. ನಾನು ಆ ಪಕ್ಷ ಈ ಪಕ್ಷ ಎಂದು ಮಾತಾನಾಡುತ್ತಿಲ್ಲ. ಎಲ್ಲರಿಗು ಒಂದೇ ನಿಯಮ ಅನ್ವಯ ಆಗಲಿ ಎಂದಷ್ಟೇ ಹೇಳುತ್ತಿದ್ದೇನೆ ಎಂದು ತಿಳಿಸಿದರು.
ಮೇಲ್ಮನೆ ರದ್ದತಿ ಮಾಡಿ ಎಂಬ ಚರ್ಚೆಯ ಬಗ್ಗೆ ಉತ್ತರಿಸಿ, ಅಂತಹ ಯಾವುದೇ ಚರ್ಚೆಗಳು ಇಲ್ಲ.
ಆಗಿರುವ ತಪ್ಪಿನ ಬಗ್ಗೆ ಸಭಾಪತಿಗಳು ಕ್ರಮ ಕೈಗೊಳ್ಳುತ್ತಾರೆ.ಈ ಬಗ್ಗೆ ಹೆಚ್ಚಿನ ಚರ್ಚೆಯೂ ಬೇಡ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಮ್ಮ ಮಾತಿಗೆ ತೆರೆ ಎಳೆದರು.