HomeKarnataka Newsರಾಮನಗರ: ಮರಕ್ಕೆ ಕಾರು ಡಿಕ್ಕಿ ಹೊಡೆದು ಯುವಕ SPOT DEATH!

ರಾಮನಗರ: ಮರಕ್ಕೆ ಕಾರು ಡಿಕ್ಕಿ ಹೊಡೆದು ಯುವಕ SPOT DEATH!

For Dai;y Updates Join Our whatsapp Group

ರಾಮನಗರ:- ಕನಕಪುರ ತಾಲೂಕಿನ ದೊಡ್ಡಮುದವಾಡಿ ಗ್ರಾಮದ ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಯುವಕ ದುರ್ಮರಣ ಹೊಂದಿದ ಘಟನೆ ಜರುಗಿದೆ.

ನಿದ್ರೆ ಮಂಪರಿನಲ್ಲಿದ್ದ ಕಾರು ಚಾಲಕ ನಿಯಂತ್ರಣ ಕಳೆದುಕೊಂಡು ಮರಕ್ಕೆ ಗುದ್ದಿದ್ದಾನೆ. ಡಿಕ್ಕಿಯಾಗಿರುವ ರಭಸಕ್ಕೆ ವಿನಯ್ ಎಂಬ ಯುವಕ ಸ್ಥಳದಲ್ಲೇ ಮೃತ ಪಟ್ಟಿದ್ದು, ಅನಿಕೇತ್ ಎಂಬವನಿಗೆ ಗಂಭೀರ ಗಾಯವಾಗಿದೆ.

ಕಾರಿನಲ್ಲಿದ್ದವರು ಬೆಂಗಳೂರಿನ ಇಟ್ಟಮಡು ನಿವಾಸಿಗಳಾಗಿದ್ದು, ವೀಕೆಂಡ್ ಹಿನ್ನೆಲೆ ರೆಸಾರ್ಟ್‌ಗೆ ಬಂದಿದ್ದರು. ಹಿಂತಿರುಗಿ ಹೋಗುವಾಗ ಅಪಘಾತ ಸಂಭವಿಸಿದೆ. ಸ್ಥಳೀಯರು ಗಾಯಾಳುವನ್ನ ಹಾರೋಹಳ್ಳಿಯ ದಯಾನಂದ ಸಾಗರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಕನಕಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img