ಬೆಂಗಳೂರು: ಐಷಾರಾಮಿ ವಿಲ್ಲಾಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊತ್ತನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅಮ್ರೋಜ್ ಬಂಧಿತ ಆರೋಪಿಯಾಗಿದ್ದು, ತ್ರಿಪುರ ಮೂಲದವನಾದ ಆರೋಪಿ ಅನೇಕ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದನು.
Advertisement
ಆರೋಪಿಯ ಬಂಧನದಿಂದ 9 ಪ್ರಕರಣಗಳು ಪತ್ತೆಯಾಗಿದ್ದು, ಬಂಧಿತನಿಂದ 21 ಲಕ್ಷ ಮೌಲ್ಯದ 170 ಗ್ರಾಂ ಚಿನ್ನಾಭರಣ, ವಿವಿಧ ಕಂಪನಿಯ 32 ವಾಚ್ ಗಳು , 3900 ಅಮೆರಿಕಲ್ ಡಾಲರ್, 5 ಮೊಬೈಲ್ ಸೀಜ್ ಮಾಡಲಾಗಿದೆ. ಇನ್ನೂ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.