HomePolitics Newsಇಂದಿರಾ ಕ್ಯಾಂಟೀನ್ ವರದಾನವಾಗಿದೆ : ಜಿ.ಎಸ್. ಪಾಟೀಲ

ಇಂದಿರಾ ಕ್ಯಾಂಟೀನ್ ವರದಾನವಾಗಿದೆ : ಜಿ.ಎಸ್. ಪಾಟೀಲ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್ ಒಂದಾಗಿದ್ದು, ಬಡವರಿಗೆ, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಅನೇಕರಿಗೆ ಇಂದಿರಾ ಕ್ಯಾಂಟೀನ್ ವರದಾನವಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಪಟ್ಟಣದ ಬಸ್ ನಿಲ್ದಾಣದಲ್ಲಿ ಅಂದಾಜು ರೂ. 87 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟಿನ್‌ಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಶಿಕ್ಷಣ, ವ್ಯಾಪಾರ-ವಹಿವಾಟಿಗಾಗಿ ಪಟ್ಟಣ ಸೇರಿ ಸುತ್ತಲಿನ ಗ್ರಾಮಗಳ ಜನತೆ ಮತ್ತು ನೆರೆಯ ತಾಲೂಕಿನಿಂದ ಆಗಮಿಸುವ ಸಾವಿರಾರು ಜನರಿಗೆ ಇಂದಿರಾ ಕ್ಯಾಂಟೀನ್ ಅನುಕೂಲವಾಗಿದೆ. ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಜನರಿಗೆ ನೆರವಾಗುವ ಉದ್ದೇಶದಿಂದ ಸಿದ್ದರಾಮಯ್ಯ ಸರ್ಕಾರವು ಪ್ರತಿ ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ನಿರ್ಮಿಸುತ್ತಿದೆ ಎಂದರು.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಕಾಂಗ್ರೆಸ್ ಸರ್ಕಾರವು ಮಹಿಳೆಯರ, ವಿದ್ಯಾರ್ಥಿಗಳ, ಎಲ್ಲ ವರ್ಗಗಳ ಹಿತವನ್ನು ಕಾಪಾಡುವ ದಿಸೆಯಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಆದರೆ ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಸಹಿಸಿಕೊಳ್ಳಲಾಗದೆ ಸುಳ್ಳು ಆರೋಪಗಳ ಮೂಲಕ ಜನರ ದಿಕ್ಕು ತಪ್ಪಿಸುವ ಕಾರ್ಯವನ್ನು ಮಾಡುತ್ತಿದೆ. ದೇಶ ಹಾಗೂ ರಾಜ್ಯದ ಜನತೆ ಕಾಂಗ್ರೆಸ್ ಪರವಾಗಿದ್ದಾರೆ. ಜನಪರ ಕಾರ್ಯಕ್ರಮಗಳೊಂದಿಗೆ ಕಾಂಗ್ರೆಸ್ ಸರ್ಕಾರವು ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಿದೆ ಎಂದರು.

ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ, ಉಪಾಧ್ಯಕ್ಷೆ ಸವಿತಾ ಬಿದರಳ್ಳಿ, ಸದಸ್ಯರಾದ ಶಿವರಾಜ ಘೋರ್ಪಡೆ, ರಾಜು ಸಾಂಗ್ಲಿಕರ, ವೆಂಕಟೇಶ ಮುದಗಲ್, ದ್ರಾಕ್ಷಾಯಿಣಿ ಚೋಳಿನ, ರಫೀಕ್ ತೋರಗಲ್, ಉಮೇಶ ರಾಠೋಡ, ವೆಂಕಟೇಶ ಮುದಗಲ್, ಮುದಿಯಪ್ಪ ಮುದೋಳ, ಮುಖಂಡರಾದ ಸಿದ್ದಪ್ಪ ಬಂಡಿ, ಅಶೋಕ ಬಾಗಮಾರ, ಶ್ರೀಧರ ಬಿದರಳ್ಳಿ, ದುರಗಪ್ಪ ಮುಧೋಳ, ಅರಿಹಂತ ಬಾಗಮಾರ, ಶರಣಪ್ಪ ಚಳಗೇರಿ, ಸಿದ್ದಪ್ಪ ಚೋಳಿನ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!