ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದೆ. ಈ ಹಿನ್ನಲೆ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪಟ್ಟುಹಿಡಿದಿದೆ.
Advertisement
ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು, ಕಾರ್ಯಕರ್ತರು ಬೆಂಗಳೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬೆಂಗಳೂರಿನ ಕುಮಾರಕೃಪ ಗೆಸ್ಟ್ ಹೌಸ್ ಬಳಿ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.