HomeGadag Newsಯೋಜನೆಗಳ ಸೌಲಭ್ಯ ಅರ್ಹರಿಗೆ ತಲುಪಲಿ : ಭರತ್ ಎಸ್

ಯೋಜನೆಗಳ ಸೌಲಭ್ಯ ಅರ್ಹರಿಗೆ ತಲುಪಲಿ : ಭರತ್ ಎಸ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಇರುವ ಸೌಲಭ್ಯ ತಲುಪಿಸುವಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಸಫಾಯಿ ಕರ್ಮಚಾರಿಗಳಿಗೆ ದೊರಕಬೇಕಾದ ವಿವಿಧ ಸೌಲಭ್ಯಗಳನ್ನು ಒದಗಿಸುವಲ್ಲಿ ಕ್ರಮ ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಸಫಾಯಿ ಕರ್ಮಚಾರಿಗಳ/ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ 3ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ನಿಗದಿಪಡಿಸಿದ ವೇತನ ಪಾವತಿಸುವುದು ಹಾಗೂ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಡುವುದು ಅಧಿಕಾರಿಗಳ ಕರ್ತವ್ಯ. ಗುತ್ತಿಗೆ ಸಫಾಯಿ ಕರ್ಮಚಾರಿಗಳಿಗೆ ಗುತ್ತಿಗೆ ಏಜೆನ್ಸಿದಾರರು ಸಮಯಕ್ಕೆ ಸರಿಯಾಗಿ ನಿಗದಿಪಡಿಸಿದ ವೇತನ ಸೌಲಭ್ಯಗಳನ್ನು ವಿತರಿಸುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ವೇತನದೊಂದಿಗೆ ಇ.ಎಸ್.ಐ ಪಿಎಫ್ ಪಾವತಿಸುವ ಬಗ್ಗೆ ಪರಿಶೀಲಿಸಿ ನಿಯಮಾನುಸಾರ ಇದ್ದಲ್ಲಿ ಮಾತ್ರವೇ ಗುತ್ತಿಗೆದಾರರಿಗೆ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದರು.

ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಮಹೇಶ ಪೋತದಾರ ಮಾತನಾಡಿ, 21-12-2023ರಂದು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳಲ್ಲಿ ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳ ಬಗ್ಗೆ ಮಾಹಿತಿ ಹಾಗೂ ತರಬೇತಿ ಕಾರ್ಯಾಗಾರವನ್ನು ಜರುಗಿಸಿ, ಅವಶ್ಯಕ ಸುರಕ್ಷತಾ ಪರಿಕರಗಳನ್ನು ವಿತರಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಮತ್ತೊಂದು ಕಾರ್ಯಾಗಾರವನ್ನು ಏರ್ಪಡಿಸಿ ಪೌರ ಕಾರ್ಮಿಕರಲ್ಲಿ ಜಾಗೃತಿ ಮೂಡಿಸಲಾಗುವುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಿತಿಯ ಸದಸ್ಯರು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!