ಮೈಸೂರು: ಮೈಸೂರಿನಲ್ಲಿ ರೇವ್ ಪಾರ್ಟಿ ನಡೆದಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿಗೆ ಪೊಲೀಸರು ಎಂಟ್ರಿ ಕೊಟ್ಟು ಕಾರ್ಯಾಚರಣೆ ನಡೆಸಿದ್ದು, 50ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ಬಂದಿದ್ದು,ಈ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಇನ್ನೂ ಕುಮಾರಸ್ವಾಮಿಯವರು ಲೋಕಾಯುಕ್ತ ಎಡಿಜಿಪಿ ಮೇಲೆಯೂ ಟೀಕೆ ಮಾಡುತ್ತಿರುವ ಬಗ್ಗೆ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರು ತಪ್ಪೆಸೆಗಿಸಿದ್ದು, ಅಧಿಕಾರಗಳ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ. ಇಂತಹ ಹೇಳಿಕೆಗಳ ಮೇಲೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.ದಸರಾ ಉತ್ಸವದ ಸಿದ್ಧತೆಗಳ ಪರ್ತಕರ್ತರಿಗೆ ಮಾಹಿತಿ ನೀಡುತ್ತಾ, ದಸರಾ ಉತ್ಸವಗಳ ಸಿದ್ದತೆಗಳಿಗೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಸಿದ್ಧತೆಗಳನ್ನು ವೀಕ್ಷಿಸಲು ಅಕ್ಟೋಬರ್ 2 ರಂದು ಮೈಸೂರಿಗೆ ಆಗಮಿಸಲಿದ್ದೇನೆ ಎಂದರು.