ಬೆಂಗಳೂರು: ರಾಜ್ಯ ಸರ್ಕಾರ ಎಲ್ಲವನ್ನೂ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ತರಾತುರಿಯಲ್ಲಿ ಕೇಂದ್ರ ಹಣಕಾಸು ಸಚಿವೆ ಮೇಲೆ ಎಫ್‌ಎಆರ್ ದಾಖಲು ಮಾಡಿದೆ. ಎಲೆಕ್ಟ್ರಾಲ್ ಬಾಂಡ್ ಬಗ್ಗೆ ಕೇಳ ನ್ಯಾಯಲಾಯ ಆದೇಶ ಮಾಡಿದೆ. ರಾಜ್ಯ ಸರ್ಕಾರ ಎಲ್ಲವನ್ನೂ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಮಾತನಾಡಿದ ಅವರು, ಬಸವನಗೌಡ ಪಾಟೀಲ್ ಯತ್ನಾಳ್ ಪ್ರತ್ಯೇಕ ಸಭೆ ಹಿನ್ನಲೆಯಾಗಿ ತಿಳಿಸಿದರು. ಈ ಸಭೆ ಹೊಸದೇನಲ್ಲ. ನಮ್ಮ ತಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಅನೇಕ ಸವಾಲುಗಳನ್ನು ನೋಡಿ ಬೆಳೆದಿದ್ದೇನೆ. ಹೀಗಾಗಿ ಎಲ್ಲಾ ಸವಾಲನ್ನು ಯಶಸ್ವಿಯಾಗಿ ಎದುರಿಸುತ್ತೇನೆ. ಸಮಸ್ಯೆಯಿಂದ ಓಡಿ ಹೋಗುವುದಲ್ಲ. ಜೀವನದಲ್ಲಿ ಸಮಸ್ಯೆ ಇದ್ದಾಗ ವಿಶ್ವಾಸ ಹೆಚ್ಚಾಗುತ್ತದೆ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.