ಬೆಂಗಳೂರು: ಗೃಹ ಸಚಿವ ಜಿ ಪರಮೇಶ್ವರ ಅವರನ್ನು ಇಂದು ಬೆಳಗ್ಗೆ ಭೇಟಿಯಾಗಿ ಮಾತುಕತೆ ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್, ಆ ಬಗ್ಗೆ ನಗರದಲ್ಲಿ ಮಾತನಾಡಿದ ಡಿಸಿಎಂ ಅವರು, ನಿಮಗೆ ರಾಜಕೀಯ ಬಿಟ್ಟು ಬೇರೆ ವಿಚಾರಗಳು ಕಾಣಿಸುವುದಿಲ್ಲವೇ?. ಜನರು ನಮ್ಮ ಮೇಲೆ ವಿಶ್ವಾಸವನ್ನಿಟ್ಟು ಅಧಿಕಾರ ಕೊಟ್ಟಿದ್ದಾರೆ, ಅವರ ಆಶೋತ್ತರಗಳನ್ನು ಈಡೇರಿಸಬೇಕು ಎಂದರು.
ನಾವೆಲ್ಲಾ ಪ್ರತಿದಿನ ರಾಜಕೀಯ ಮಾಡುತ್ತಲೇ ಇರುತ್ತೇವೆ. ಅಭಿವೃದ್ದಿಯಿದ್ದರೇ ತಾನೇ ರಾಜಕೀಯ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಎತ್ತಿನಹೊಳೆ ಕೆಲಸ ಮುಗಿಸಬೇಕು, ಪ್ರಣಾಳಿಕೆಗಳಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಬೇಕು. ಪ್ರತಿದಿನ ಸಮಯ ಓಡುತ್ತಿರುತ್ತದೆ” ಎಂದರು.
ಅಧಿಕಾರಿಗಳು ಇಲ್ಲದೇ ಪರಮೇಶ್ವರ ಹಾಗೂ ನೀವು ಮಾತ್ರ ಒಟ್ಟಿಗೆ ಸೇರಿದ್ದೀರಿ ಎಂದು ಕೇಳಿದಾಗ, “ನಾವು 136 ಕಾಂಗ್ರೆಸ್ ಶಾಸಕರು ಒಟ್ಟಿಗೆ ಇದ್ದೇವೆ. ಇಲ್ಲಿ ಚರ್ಚೆ ಮಾಡುವಾಗ ಅಧಿಕಾರಿಗಳು ಬೇಕಾಗಿಲ್ಲ. ನಾಯಕರ ಹಿಂದೆ ಅಧಿಕಾರಿಗಳು ಬೇಕಾಗಿಲ್ಲ. ನಾವು ಆಲೋಚಿಸುತ್ತೇವೆ, ಚರ್ಚೆ ಮಾಡುತ್ತೇವೆ, ಅಭಿಪ್ರಾಯ ಕೇಳುತ್ತೇವೆ. ಮಾತನಾಡುವವರು ಹಾಗೂ ತೀರ್ಮಾನಿಸುವವರು ಒಬ್ಬರೇ ” ಎಂದು ಹೇಳಿದರು.


