ಮನಕಲಕುವ ಘಟನೆ: ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವು!

0
Spread the love

ದಾವಣಗೆರೆ:-ಜಿಲ್ಲೆಯ ಜಗಳೂರಿನ ಅಸಗೋಡು ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಮನಕಲಕುವ ಘಟನೆ ಜರುಗಿದೆ.

Advertisement

12 ವರ್ಷದ ಗಂಗಮ್ಮ, 8 ವರ್ಷದ ಕಾವ್ಯ ಮೃತ ದುರ್ದೈವಿಗಳು. ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಪೋಷಕರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ. ಅಷ್ಟರಲ್ಲಾಗಲೇ ಬಾಲಕಿಯರು ಮೃತಪಟ್ಟಿದ್ದಾರೆ. ಮಕ್ಕಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here