ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಡಬಲ್ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಒಂದೆಡೆ ED ಆದ್ರೆ, ಮತ್ತೊಂದೆಡೆ ಸಿಬಿಐ ತನಿಖೆಗೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳು ಸಿದ್ದರಾಮಯ್ಯ ಅವರಿಗೆ ಯಾವುದೇ ಕ್ಷಣದಲ್ಲಿ ನೋಟಿಸ್ ಕೊಟ್ಟು ವಿಚಾರಣೆ ನಡೆಸಬಹುದಾಗಿದೆ. ಶೀಘ್ರದಲ್ಲೇ ಇಡಿ ಅಧಿಕಾರಿಗಳು ಸಿಎಂ ಆಪ್ತರ ನಿವಾಸ ಅಥವಾ ಕಚೇರಿಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ.
ಈಗಾಗಲೇ ತೆರೆಮರೆಯಲ್ಲಿ ಕಾರ್ಯಾಚರಣೆ ನಡೆಸಿರುವ ಇಡಿ ಅಧಿಕಾರಿಗಳು ಸಿಎಂ ಆಪ್ತರ ಚಲನವಲನ ಮೇಲೂ ನಿಗಾ ಇಟ್ಟಿದ್ದಾರೆ. ಹಾಗೂ ಸಿಎಂ ಆಪ್ತರ ಮನೆ, ಸಂಬಂಧಿಕರ ಮಾಹಿತಿ ಕಲೆ ಹಾಕಿದ್ದಾರೆ. ರಾಜ್ಯಾದ್ಯಂತ ಸಿಎಂ ಆಪ್ತರ ನಿವಾಸ ಅಥವಾ ಕಚೇರಿ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಇದೆ. ಶೀಘ್ರದಲ್ಲೇ ದಾಳಿ ನಡೆಸಿ ಮತ್ತಷ್ಟು ಮಾಹಿತಿ ಸಂಗ್ರಹಿಸಲು ತಯಾರಿ ನಡೆಯುತ್ತಿದೆ. ಜಾರ್ಖಂಡ್ ಮಾದರಿ ಇಡಿ ಅಧಿಕಾರಿಗಳು ದಾಳಿ ಮಾಡುವ ಸಾಧ್ಯತೆ ಇದೆ.