14 ಸೈಟ್ ಹಿಂದಿರುಗಿಸಲು ನಿರ್ಧಾರ: ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದ ಅಶೋಕ್

0
Spread the love

ಬೆಂಗಳೂರು: ಮುಡಾ ಹಗರಣ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಲೋಕಾಯುಕ್ತ, ಇಡಿ ದೂರು ದಾಖಲಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು 14 ಸೈಟ್​ಗಳ ಕ್ರಯ ಪತ್ರ ಹಿಂದಿರುಗಿಸುವುದಾಗಿ ಮುಡಾಗೆ ಪತ್ರ ಬರೆದಿದ್ದಾರೆ. ಬೆನ್ನಲ್ಲೇ ಪ್ರತಿಪಕ್ಷ ನಾಯಕ ಆರ್ ಅಶೋಕ್, ಸಂವಿಧಾನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದು ಬಣ್ಣಿಸಿದ್ದಾರೆ.

Advertisement

ಸಿಎಂ ಪತ್ನಿಯ ನಿರ್ಧಾರದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಅಶೋಕ್, ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯನವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಸೈಟುಗಳನ್ನು ವಾಪಸ್ಸು ನೀಡುವ ‘ದೊಡ್ದ’ ಮನಸ್ಸು ಮಾಡಿರುವುದು, ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ.

ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ. ಜಗ್ಗಲ್ಲ, ಬಗ್ಗಲ್ಲ ಎಂದು ಅಧಿಕಾರದ ಮದದಿಂದ ಮೆರೆಯುತ್ತಿದ್ದವರ ವಿರುದ್ಧ ಬಾಬಾಸಾಹೇಬ್ ಅಂಬೇಡ್ಕರರ ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ ಎಂದು ಎಕ್ಸ್ ಸಂದೇಶದಲ್ಲಿ ಅಶೋಕ್ ಉಲ್ಲೇಖಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here