ನಿಮ್ಮ ವಿರುದ್ಧವೇ ಸಾಕಷ್ಟು ಕೇಸ್ ಇದೆ: ಚಂದ್ರಶೇಖರ್ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ

0
Spread the love

ನವದೆಹಲಿ: ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಇದರ ಬೆನ್ನಲ್ಲೇ  ಮೊನ್ನೆ ಅಧಿಕಾರಿ ಹೇಳಿದ ಮಾತನ್ನು ಗಮನಿಸಿದ್ದೇನೆ. ಒಂದು ದಿನವಾದ್ರೂ ನನ್ನ ಒಳಗೆ ಕಳುಹಿಸಬೇಕೆಂದು ಮಾತನಾಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ನವದೆಹಲಿಯಲ್ಲಿ ಮಾತನಾಡಿದ ಅವರು,

Advertisement

ಚಾರ್ಜ್​ಶೀಟ್​ನಲ್ಲಿ ನನ್ನ ಹೆಸರು ಸೇರಿಸಲು ರಾಜ್ಯಪಾಲರ ಮೊರೆ ಹೋಗಿದ್ದಾರೆ. ನಾನಾದರೋ ಜಾಮೀನು ಪಡೆದು ಹೊರಗಿದ್ದೇನೆ. ಯಾರೋ ಒಬ್ಬ ಅಧಿಕಾರಿ ‘ಕ್ರಿಮಿನಲ್’ ಎಂಬ ಪದ ಬಳಕೆ ಮಾಡಿದ್ದಾರೆ. ನಾನು ಜಾಮೀನು ಪಡೆದಿದ್ದು ತಪ್ಪು ಮಾಡಿದ್ದೇನೆ ಎಂದಲ್ಲ. ನನ್ನ ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದಾರೆ. ಅದಕ್ಕಾಗಿ ಪಡೆದಿದ್ದೇನೆ ಎಂದು ಕುಮಾರಸ್ವಾಮಿ ಕಿಡಿ ಕಾರಿದರು.

ಇನ್ನೂ ಅಧಿಕಾರಿ ಯಾವ ಹಿನ್ನೆಲೆಯಿಂದ ಬಂದವರು? ಅಕ್ರಮ ಹಣ ಸಂಪಾದನೆ ಮಾಡುವವರಿಗೆ ರಕ್ಷಣೆ ಕೊಡಿ ಎಂದು ನಿಮ್ಮನ್ನು ಐಪಿಎಸ್ ಆಫೀಸರ್ ಮಾಡಿದ್ದಾರಾ? ನಾನು ಬೇಲ್ ತಗೊಂಡೆ, ತನಿಖೆಗೆ ಮಾಡಬೇಡಿ ಎಂದು ಹೇಳಿಲ್ಲ. ನೀವು ಏನ್ ಮಾಡಿದ್ದೀರಿ? ನಿಮ್ಮ ವಿರುದ್ಧವೇ ಕೇಸ್ ಇದೆ, ಆರೋಪಿ ನಂಬರ್ 2. ಹೈಕೋರ್ಟ್​​​ನಲ್ಲಿ ಅಧಿಕಾರಿ ತಡೆಯಾಜ್ಞೆ ತೆಗೆದುಕೊಂಡಿದ್ದಾರೆ. ನಾನು ಯಾರಿಗೂ ರಕ್ಷಣೆ ಕೊಡಲು ಇಲ್ಲ ಎಂದು ಕುಮಾರಸ್ವಾಮಿ ಗುಡುಗಿದರು.


Spread the love

LEAVE A REPLY

Please enter your comment!
Please enter your name here