ಬೆಂಗಳೂರು: ಮದುವೆಗೆ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದನ್ (25) ಮೃತಪಟ್ಟ ಯುವಕನಾಗಿದ್ದು, ರೂಮಿನಲ್ಲೇ ನೇಣು ಬಿಗಿದುಕೊಂಡು ಮದನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಿರಿಯಲ್ ನಟಿ ವೀಣಾ ಮೋಹಕ್ಕೆ ಬಿದ್ದಿದ್ದ ಮದನ್ ಆಕೆಯನ್ನು ಪ್ರೀತಿ ಮಾಡುತ್ತಾ ಕೆಲವು ದಿನಗಳಿಂದ ಇಬ್ಬರೂ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದರು.
ಇಬ್ಬರೂ ನಿನ್ನೆ ರಾತ್ರಿ ಒಂದೇ ರೂಮಿನಲ್ಲಿ ಪಾರ್ಟಿ ಮಾಡಿದ್ದರು. ಯುವಕ ಮದನ್‌ನನ್ನು ಮನೆಗೆ ಕರೆಸಿಕೊಂಡು ಕಂಠಪೂರ್ತಿ ಕುಡಿದು ಪಾರ್ಟಿ ಮಾಡಿದ ಇಬ್ಬರ ನಡುವೆ ಮದುವೆ ವಿಚಾರಕ್ಕೆ ಜಗಳ ನಡೆದಿದೆ.
ಆದರೆ ಗೆಳತಿ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದಾಳೆ. ಗೆಳತಿಯ ನಡೆಯಿಂದ ಬೇಸರಗೊಂಡ ಮದನ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಟಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.