ವಿಜಯಸಾಕ್ಷಿ ಸುದ್ದಿ, ಗದಗ : ಕಳೆದ ಹಲವಾರು ದಿನಗಳಿಂದ ರಾಜ್ಯಾದ್ಯಂತ ಕಂದಾಯ ಇಲಾಖೆಯ ನೌಕರರು ತಮ್ಮ ಬೇಡಿಕೆಗಳಿಗಾಗಿ ಮುಷ್ಕರದಲ್ಲಿ ತೊಡಗಿರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಾತಿ, ಆದಾಯ, ರಹವಾಸಿ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಿದರೆ ಅವರಿಗೆ ಸಮಯಕ್ಕೆ ಸರಿಯಾಗಿ ಸಿಗದ ಕಾರಣ ರಾಜ್ಯ ಸರ್ಕಾರದ ಸ್ಕಾಲರ್ಶಿಪ್ ಸೇರಿದಂತೆ ವಿವಿಧ ಸರ್ಕಾರದ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬೇಕಾದ ನಿಗದಿತ ದಿನಾಂಕ ಮುಗಿಯುತ್ತಿದೆ.
Advertisement
ಸದರಿ ದಿನಾಂಕಗಳನ್ನು ಇನ್ನೂ ಒಂದು ತಿಂಗಳ ಕಾಲ ಹೆಚ್ಚಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಮತ್ತು ಸಂಧ್ಯಾ ಸುರಕ್ಷಾ ಯೋಜನೆಯ ವೃದ್ಧಾಪ್ಯ ವೇತನ ಅರ್ಜಿಯನ್ನು ಪುನಃ ಪ್ರಾರಂಭಿಸಬೇಕೆಂದು ಗದಗ-ಬೆಟಗೇರಿ ನಗರಸಭೆ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಚಾಂದಸಾಬ ಕೊಟ್ಟೂರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.