Homecultureಉದ್ಯೋಗ ಖಾತರಿಯಿಂದ ಆದಾಯ ಖಾತರಿ : ಮಲ್ಲಯ್ಯ ಕೊರವನವರ

ಉದ್ಯೋಗ ಖಾತರಿಯಿಂದ ಆದಾಯ ಖಾತರಿ : ಮಲ್ಲಯ್ಯ ಕೊರವನವರ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಆಯಾ ಪ್ರದೇಶದ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ ಕೆಲಸ ಖಾತರಿ ಇದ್ದು, ಗಂಡು-ಹೆಣ್ಣಿಗೆ ಸಮಾನವಾಗಿ ಪ್ರತಿ ದಿನಕ್ಕೆ-349 ರೂ ಕೂಲಿ ನೀಡಲಾಗುತ್ತಿದೆ ಎಂದು ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ ಹೇಳಿದರು.

ಇಲ್ಲಿಯ ಗ್ರಾ.ಪಂ ಆವರಣದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರಕಾರ ನಿಗದಿಪಡಿಸಿದ ಕೆಲಸದ ಅಳತೆ, ಒಂದು ದಿನದ ಕೂಲಿ ಪಡೆಯಲು ಮಾಡಬೇಕಾದ ಕೆಲಸದ ಪ್ರಮಾಣ ಮತ್ತು ಕೆಲಸದ ಅವಧಿ, ಯೋಜನೆಯಡಿಯಲ್ಲಿ ದೊರೆಯುವ ವಯಕ್ತಿಕ ಸೌಲಭ್ಯಗಳು ಮತ್ತು ಅರ್ಹತೆಗಳು, ಕಾಮಗಾರಿ ಪ್ರಮಾಣದಲ್ಲಿ ಹಿರಿಯ ನಾಗರಿಗರಿಗೆ ಮತ್ತು ವಿಶೇಷ ಚೇತನರಿಗೆ ಶೇ.50ರಷ್ಟು ರಿಯಾಯಿತಿ, ಕಾಮಗಾರಿ ಸ್ಥಳದಲ್ಲಿ ಒದಗಿಸಬೇಕಾದ ಸೌಲಭ್ಯಗಳು ಹಾಗೂ ಇತರೆ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ನರೇಗಾ ಸಹಾಯಕ ನಿರ್ದೇಶಕ ಕುಮಾರ ಪೂಜಾರ ಮಾತನಾಡಿ, ಪ್ರತಿಯೊಬ್ಬರೂ ನರೇಗಾ ಯೋಜನೆಯ ಸದುಪಯೋಗವನ್ನು ಪಡೆಯಬೇಕು. ನರೇಗಾ ಯೋಜನೆಯಿಂದ ಕೃಷಿ ಇಲಾಖೆ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಇಲಾಖೆಯಲ್ಲಿನ ಕಾಮಗಾರಿಗಳ ಸದುಪಯೋಗ ಪಡೆಯಬಹುದು ಎಂದು ಹೇಳಿದರು.

ಗ್ರಾ.ಪಂ ಅಧ್ಯಕ ಕೆಂಚಪ್ಪ ಪೂಜಾರ ಮಾತನಾಡಿ, ಗ್ರಾಮೀಣ ಪ್ರದೇಶದ ಜನರು ಪಟ್ಟಣಗಳಿಗೆ ಗುಳೆ ಹೋಗುವುದನ್ನು ತಪ್ಪಿಸಿ ನರೇಗಾದಡಿ ಕೆಲಸ ಪಡೆದು ತಮ್ಮೂರಲ್ಲೇ ನೆಲೆಸಬೇಕು. ಪ್ರತಿಯೊಬ್ಬರೂ 100 ಮಾನವ ದಿನಗಳ ಕೆಲಸ ಪಡೆಯಬೇಕು. ಪ್ರತಿ ವರ್ಷ ನರೇಗಾದಡಿ ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗಬೇಕು ಎಂದು ಹೇಳಿದರು.

ಗ್ರಾ.ಪಂ ಉಪಾಧ್ಯಕ್ಷೆ ಪುಷ್ಪಾ ಪಾಟೀಲ, ಪಿ.ಡಿ.ಒ ರಾಜುಕುಮಾರ ಭಜಂತ್ರಿ, ಕಾರ್ಯದರ್ಶಿ ಪ್ರದೀಪ ಆಲೂರ, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img