ಅ.7ರಂದು ಸ್ಲಂ ಬೋರ್ಡ್ ಕಚೇರಿಗೆ ಮುತ್ತಿಗೆ

0
Slum Board office besieged on A.7
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ನಗರದಲ್ಲಿ ಅನೇಕ ಸ್ಲಂ ಪ್ರದೇಶಗಳನ್ನು ಸ್ಲಂ ಕಾಯ್ದೆ 197 ರ ಪ್ರಕಾರ ಘೋಷಣೆ ಮಾಡಿ ಸುಮಾರು ದಶಕಗಳು ಕಳೆದರೂ ಸಹ ಈ ವರೆಗೊ ಸ್ಥಳೀಯ ನಾಗರಿಕರಿಗೆ ಕನಿಷ್ಠ ಮಟ್ಟದ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಸ್ಲಂ ಬೋರ್ಡ್ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ಸ್ಲಂ ಪ್ರದೇಶದ ವಸತಿ, ಶೌಚಾಲಯ, ಚರಂಡಿ, ರಸ್ತೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Advertisement

ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಮಾತನಾಡಿ, ಕಳೆದ ಹಲವು ವರ್ಷಗಳಿಂದ ನಗರದ ಕೊಳಗೇರಿ ಪ್ರದೇಶಗಳ ಅಭಿವೃದ್ಧಿಗಾಗಿ ನಿರಂತರ ಹೋರಾಟಗಳನ್ನು ನಡೆಸಿದರೂ ಅಧಿಕಾರಿಗಳು ಮಾತ್ರ ಕಾಣದವರಂತೆ ವರ್ತಿಸುತ್ತಿದ್ದಾರೆ. ಇದರ ಬಗ್ಗೆ ಅನೇಕ ಬಾರಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಸ್ಲಂ ಬೋರ್ಡ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸದೇ ಮೌನವಾಗಿರುವುದನ್ನು ನಾವು ಖಂಡಿಸುತ್ತೇವೆ.

ಸ್ಲಂ ಬೋರ್ಡ್ ಅಧಿಕಾರಿಗಳ ದುರಾಡಳಿತವನ್ನು ಖಂಡಿಸಿ ಅ.7ರಂದು ಸ್ಲಂ ಸಮಿತಿಯ ನೇತೃತ್ವಲ್ಲಿ ನಗರದ ನೂರಾರು ಸ್ಲಂ ನಿವಾಸಿಗಳಿಂದ ಸ್ಲಂ ಬೋರ್ಡ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಗದಗ-ಬೆಟಗೇರಿ ನಗರದ ಎಲ್ಲಾ ಸ್ಲಂ ಪ್ರದೇಶದ ಜನರು ಹೋರಾಟದಲ್ಲಿ ಭಾಗವಹಿಸಬೇಕೆಂದು ಹೇಳಿದರು.

ಗದಗ ಜಿಲ್ಲಾ ಸ್ಲಂ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಸ್ಲಂ ಸಮಿತಿ ಮುಖಂಡರಾದ ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಮೆಹರುನಿಸಾ ಢಾಲಾಯತ, ಸಾಕ್ರುಬಾಯಿ ಗೋಸಾವಿ, ಮೈಮುನಿಸಾ ಬೈರಕದಾರ, ಮಲೇಶಪ್ಪ ಕಲಾಲ, ದಾದು ಗೋಸಾವಿ, ಮಕ್ತುಮಸಾಬ ಮುಲ್ಲಾನವರ, ನಜೀರಅಹ್ಮದ ಹಾವಗಾರ, ಶಂಕ್ರಪ್ಪ ರೋಣ, ಜಾಫರ ಮಲಬಾರ, ಮೀನಾಕ್ಷಿ ಅಣ್ಣಿಗೇರಿ, ಹಾಗೂ ವಿವಿಧ ಸ್ಲಂ ಪ್ರದೇಶದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಗದಗ ಜಿಲ್ಲೆಯ ಸ್ಲಂ ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಹಾಗೂ ಮನವಿಗಳನ್ನು ನೀಡಲು ಸ್ಲಂ ಬೋರ್ಡ್ ಕಚೇರಿಗೆ ಹೋದರೆ ಅಧಿಕಾರಿಗಳು ಸ್ಥಳದಲ್ಲಿ ಸಿಗದೇ ಸುಳ್ಳು ಹೇಳುತ್ತ ಕಾಲ ಕಳೆಯುತ್ತಿದ್ದಾರೆ ಎಂದು ಇಮ್ತಿಯಾಜ ಆರ್.ಮಾನ್ವಿ ಆರೋಪಿಸಿದರು.


Spread the love

LEAVE A REPLY

Please enter your comment!
Please enter your name here