ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಸಿ.ಎನ್. ಕತ್ತಿ ಪ್ರೌಢಶಾಲೆ ಚಿಂಚಲಿಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜಯಂತಿಯನ್ನು ಆಚರಿಸಲಾಯಿತು.
Advertisement
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಕೆ.ಎನ್. ಬೇದ್ರೆ ಮಾತನಾಡಿ, ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಸರಳ ಜೀವನದ ಕುರಿತು ಮಕ್ಕಳಿಗೆ ತಿಳಿಸಿದರು. ಪಿ.ಜಿ. ಮೂಲಿಮನಿ ಮಾತನಾಡಿ, ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆ ಮಾರ್ಗದಿಂದ ಏನಾದರೂ ಸಾಧಿಸಬಹುದು ಎಂದು ತಿಳಿಸಿದರು.
ಎಸ್.ಎ. ಪಾಟೀಲ್ ಮಾತನಾಡಿ, ಗಾಂಧೀಜಿಯವರ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜೀವನದ ಹಲವು ಘಟನೆಗಳನ್ನು ಮಕ್ಕಳಿಗೆ ತಿಳಿಸುವುದರ ಮೂಲಕ ಇವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದರು.
ದೈಹಿಕ ಶಿಕ್ಷಕ ಎಫ್.ಎಂ. ಮುಶಣ್ಣನವರ ಕಾರ್ಯಕ್ರಮ ನಿರೂಪಿಸಿದರು. ಆರ್.ಆರ್. ಸರವಿ ವಂದಿಸಿದರು.