ಬರ್ತಡೇ ಕೇಕ್ ತಿಂದು ಪ್ರಾಣ ಬಿಟ್ಟ ಮಗು: ತಂದೆ-ತಾಯಿ ಗಂಭೀರ!

0
Spread the love

ಬೆಂಗಳೂರು: ಕೇಕ್ ತಿಂದು ಒಂದೇ ಕುಟುಂಬದ ಮೂರು ಜನ ಅಸ್ವಸ್ಥವಾಗಿರುವ ಘಟನೆ ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕಿತ್ಸೆ ಫಲಕಾರಿಯಾಗದೆ ಧೀರಜ್ (5) ಎಂಬ ಮಗು ಸಾವನ್ನಪ್ಪಿದೆ.  ತಂದೆ ಬಾಲರಾಜ್, ತಾಯಿ ನಾಗಲಕ್ಷ್ಮಿ ಸ್ಥಿತಿ ಗಂಭೀರವಾಗಿದ್ದು, ಬಾಲರಾಜ್‌ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಮಗನಿಗಾಗಿ ಮನೆಗೆ ಕೇಕ್‌ ತೆಗೆದು ಕೊಂಡು ಹೋಗಿದ್ದರು. ಮನೆಯಲ್ಲಿ ಪತ್ನಿ ಮತ್ತು ಮಗುವಿನ ಜತೆ ಸೇರಿ ಮೂವರು ಕೇಕ್ ತಿಂದಿದ್ದರು. ಕೇಕ್ ತಿಂದ ನಂತರ ಮೂವರ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ.

Advertisement

ಕೂಡಲೇ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಮೂವರ ಸ್ಥಿತಿ ಗಂಭೀರವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಧೀರಜ್‌ ತೀವ್ರ ಅಸ್ವಸ್ಥಗೊಂಡಿದ್ದರಿಂದ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಬಾಲರಾಜ್ , ನಾಗಲಕ್ಷ್ಮಿ ದಂಪತಿ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆಪಿ ಅಗ್ರಹಾರ ಠಾಣೆ ಪೊಲೀಸರಿಂದ ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

 


Spread the love

LEAVE A REPLY

Please enter your comment!
Please enter your name here