ಬೆಂಗಳೂರು: ಪಾಲಿಶ್ ಮಾಡಿ ಕೊಡ್ತೀನಿ ಅಂತ 1.27 ಕೆಜಿ ಚಿನ್ನದ ಜೊತೆ ಪರಾರಿಯಾಗಿದ್ದವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಕುರ್ ಕುಮಾರ್ ಡುಂಗರವಾಲ್(32) ಬಂಧಿತ ಆರೋಪಿಯಾಗಿದ್ದು, ಚಿನ್ನದ ಅಂಗಡಿಗಳಿಗೆ ಹೋಗಿ ಚಿನ್ನವನ್ನು ಪಾಲೀಶ್ ಮಾಡಿಕೊಡುವುದಾಗಿ ಚಿನ್ನದ ಗಟ್ಟಿ ಪಡೆದು ಎಸ್ಕೇಪ್ ಆಗಿದ್ದ.
ನಗರ್ತ ಪೇಟೆಯ ಚಿನ್ನದ ವ್ಯಾಪಾರಿ ನೀಡಿದ ದೂರಿನ ಅನ್ವಯವಾಗಿ ರಾಜಸ್ಥಾನಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ 10 ಲಕ್ಷ ಮೌಲ್ಯದ 387 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಕುಮಾರಸ್ವಾಮಿ , ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ.



