Homecultureದಸರಾ ನಿಮಿತ್ತ ದಾಂಡಿಯಾ ಕಾರ್ಯಕ್ರಮ

ದಸರಾ ನಿಮಿತ್ತ ದಾಂಡಿಯಾ ಕಾರ್ಯಕ್ರಮ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಮನೋರಮಾ ಮಹಾವಿದ್ಯಾಲಯದಲ್ಲಿ ದಸರಾ ಹಬ್ಬದ ನಿಮಿತ್ತ ವಿದ್ಯಾರ್ಥಿಗಳಿಗೆ ದಾಂಡಿಯಾ 2024 ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಎನ್.ಎಂ. ಕುಡತರಕರ ವಹಿಸಿದ್ದರು. ಪ್ರಾಚಾರ್ಯ ಬಿ.ಎಸ್. ಹಿರೇಮಠ ಪ್ರಾಸ್ತವಿಕವಾಗಿ ಮಾತನಾಡಿ, ನಾಡ ಹಬ್ಬ ದಸರಾದ ವಾತಾವರಣವನ್ನು ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದು, ವಿದ್ಯಾರ್ಥಿಗಳ ಉತ್ಸಾಹ ದ್ವಿಗುಣಗೊಳಿಸಿದೆ. ಎಲ್ಲ ವಿದ್ಯಾರ್ಥಿಗಳು ಸಕ್ರಿಯವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಕಿಶೋರ ಮುದಗಲ್ಲ ಮಾತನಾಡಿ, ಇಂದಿನ ಕಾರ್ಯಕ್ರಮ ಸ್ಮರಣೀಯವಾಗಿದೆ ಎಂದರಲ್ಲದೆ, ದಸರಾ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರುಗಳಾದ ಮಂಜುನಾಥ ಕುಡತರಕರ, ಸಂಜಯಕುಮಾರ ಕುಡತರಕರ, ಚೇತನ ಕುಡತರಕರ, ಸಂಯೋಜಕರಾದ ಪ್ರೊ. ಸವಿತಾ ಪೂಜಾರ, ಪ್ರೊ. ಅಲ್ವಿನಾ ಡಿ, ಪ್ರೊ. ಚೈತ್ರಾ ಡಿ, ಪ್ರೊ. ಶಾಹಿದಾ ಶಿರಹಟ್ಟಿ, ಪ್ರೊ. ಸಂಗಮೇಶ ಹಾದಿಮನಿ, ಪ್ರೊ. ಆರತಿ ಗೌಡರ, ಪ್ರೊ. ಕುಸುಮ, ದೈಹಿಕ ನಿರ್ದೇಶಕರಾದ ಖಯೂಮ ನವಲೂರ, ಹರೀಶ ಬಾರಕೇರ, ಉಮಾ ದಿನ್ನಿ, ಕುಶಾಲ, ವಿಜಯಲಕ್ಷ್ಮಿ ಸಾಹುಕಾರ ಸೇರಿದಂತೆ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img