ಬೆಂಗಳೂರು: ಹಿಟ್ ಆ್ಯಂಡ್ ರನ್​ಗೆ ಓರ್ವ ದುರ್ಮರಣ!

0
Spread the love

ಬೆಂಗಳೂರು:- ಸಹಕಾರ ನಗರದ ರೈಲ್ವೆ ಅಂಡರ್​ಪಾಸ್​​ ಬಳಿ ಇಂದು ಮುಂಜಾನೆ ಅಪಘಾತ ಸಂಭವಿಸಿ ಹಿಟ್ ಆ್ಯಂಡ್ ರನ್​ಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಜರುಗಿದೆ.

Advertisement

ಮುಂಜಾನೆ ಸುಮಾರು 5 ಗಂಟೆಗೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ವಾಹನಕ್ಕೆ ಸಿಲುಕಿ ಅನಾಮಿಕ ವ್ಯಕ್ತಿ ಬಲಿಯಾಗಿದ್ದಾರೆ. ಅಪಘಾತ ನಡೆಸಿ ಚಾಲಕ ಪರಾರಿಯಾಗಿದ್ದಾನೆ.

ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಕೊಡಿಗೇಹಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಮೃತ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ ಎನ್ನಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here