ಕೋಲಾರ:– ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಕೆರೆ ಕ್ರಾಸ್‌ನಲ್ಲಿ ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ತಾಯಿ-ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಜರುಗಿದೆ.
48 ವರ್ಷದ ಪದ್ಮಮ್ಮ, 26 ವರ್ಷದ ರಘು ಮೃತ ದುರ್ದೈವಿಗಳು ಎನ್ನಲಾಗಿದೆ. ಶ್ರೀನಿವಾಸಪುರ ಪಟ್ಟಣದಿಂದ ಸ್ವಗ್ರಾಮ ಕೇತಗಾನಹಳ್ಳಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.
ಅಪರಿಚಿತ ವಾಹನ ಪತ್ತೆಗಾಗಿ ಪೊಲೀಸರು ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



