ಬೆಂಗಳೂರು: ನಾವು ಕುಮಾರಸ್ವಾಮಿ ಅವರನ್ನ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ ಸುರೇಶ್ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ದಿನಕ್ಕೊಂದು ಹೇಳಿಕೆ ಕೊಡಲ್ಲ. ನಾವು ಅವರನ್ನ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ. ಅವರು ಏನೋ ಹೇಳಿಕೆ ಕೊಡಬೇಕು ಕೊಡ್ತಾರೆ. ಬೆಳಗ್ಗೆ ಒಂದು ಸಂಜೆ ಒಂದು ಹೇಳಿಕೆ ಕೊಡ್ತಾರೆ. ಅದಕ್ಕೆಲ್ಲ ನಾವು ಹೇಳಿಕೆ ಕೊಡೋಕೆ ಆಗುತ್ತಾ? ಎಂದು ಪ್ರಶ್ನೆ ಮಾಡಿದರು.
Advertisement
ಇನ್ನೂ ಸತೀಶ್ ಜಾರಕಿಹೊಳಿ, ಮಹದೇವಪ್ಪ, ಪರಮೇಶ್ವರ್ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ, ಪಕ್ಷದ ಅಧ್ಯಕ್ಷರು ಖರ್ಗೆಯವರನ್ನ ಭೇಟಿ ಮಾಡ್ತಾರೆ. ಅದಕ್ಕೆ ಬೇರೆ ಅರ್ಥ ಕೊಡೋಕೆ ಆಗುತ್ತಾ…? ಪಕ್ಷದ ಅಧ್ಯಕ್ಷರನ್ನಲ್ಲದೇ ಇನ್ಯಾರನ್ನ ಭೇಟಿ ಮಾಡೋಕೆ ಸಾಧ್ಯ? ಸರ್ಕಾರ ಅವರಾಗೇ ಬೀಳಿಸ್ತಾರೆಂಬ ಬಿಜೆಪಿ ಅಭಿಪ್ರಾಯ ಬ್ರಮೆ ಎಂದು ಹೇಳಿದ್ದಾರೆ.